ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮಾನಭಂಗಕ್ಕೆ ಯತ್ನ- ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಮಂಗಳೂರು ಅಕ್ಟೋಬರ್ 23: ರೈಲಿನಲ್ಲಿದ್ದ ಒಂಟಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸುಬ್ರಹ್ಮಣ್ಯ – ಮಂಗಳೂರು ರೈಲಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ನಿವಾಸಿ 27 ವರ್ಷದ ಮಂಜು ಎಂದು ಗುರುತಿಸಲಾಗಿದೆ. ನೆಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನ ಮಹಿಳಾ ಬೋಗಿಗೆ ಹತ್ತಿದ ಆರೋಪಿಯು ಮಹಿಳೆ ಒಬ್ಬರೇ ಇರುವುದನ್ನು ಕಂಡು ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಹಿಳೆಯು ರೈಲಿನ ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದಾರೆ. ರೈಲು ನಿಲ್ಲಿಸಿದ ತಕ್ಷಣವೇ ಹಾರಿ ಪರಾರಿಯಾದ ಆರೋಪಿಯನ್ನು ಕೋಡಿಂಬಾಳದಲ್ಲಿ ಸಾರ್ವಜನಿಕರು ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಡಬ ಪೊಲೀಸರು ಆರೋಪಿಯನ್ನು ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Facebook Comments

comments