Connect with us

    LATEST NEWS

    ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿಹಾಕಿಕೊಂಡ ಟ್ರೈನ್ – ವಿಡಿಯೋ ವೈರಲ್

    ಲಖನೌ ಅಗಸ್ಟ್ 16: ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗುವುದು ದಿನನಿತ್ಯದ ಸಮಸ್ಯೆ, ನಗರದ ಮಧ್ಯದಲ್ಲಿ ರೈಲ್ವೆ ಕ್ರಾಸಿಂಗ್ ಇದ್ದರೆ ಟ್ರಾಫಿಕ್ ಜಾಮ್ ಯಾವಾಗಲೂ ಇರುತ್ತದೆ. ಆದರೆ ಇದೇ ಮೊದಲ ಬಾರಿಗೆ ರೈಲ ಒಂದು ಕ್ರಾಸಿಂಗ್ ನಲ್ಲಿ ವಾಹನಗಳ ಟ್ರಾಫಿಕ್ ಗೆ ಸಿಕ್ಕಿಕೊಂಡು ನಿಂತಿದೆ. ಈ ಘಟನೆ ನಡೆದಿದ್ದು, ವಾರಣಾಸಿಯ ಬನಾರಸ್ ನಲ್ಲಿ.


    ಪ್ರತಿಬಾರಿ ರೈಲ್ವೆ ಕ್ರಾಸಿಂಗ್ ವೇಳೆ ವಾಹನಗಳು ಬದಿಗೆ ನಿಂತು ಟ್ರಾಫಿಕ್ ಜಾಮ್ ಆಗುತ್ತಿತ್ತು, ಆದರೆ ಬನಾರಸ್ ನಲ್ಲಿ ಮಾತ್ರ ಟ್ರಾಫಿಕ್ ಜಾಮ್​ನಲ್ಲಿ ರೈಲು ಸಿಕ್ಕಿಹಾಕಿಕೊಂಡಿರುವ ಘಟನೆ ಇದೀಗ ವೈರಲ್ ಆಗಿದೆ. ರೈಲ್ವೆ ಕ್ರಾಸಿಂಗ್​ನಲ್ಲಿ ರೈಲು ಆಗಮಿಸುವಾಗ ವಾಹನಗಳನ್ನು ತಡೆದು ನಿಲ್ಲಿಸಿ, ರೈಲಿಗೆ ಹೋಗಲು ದಾರಿ ಮಾಡಿಕೊಡಲಾಗುತ್ತದೆ. ಆದರೆ, ಕ್ರಾಸಿಂಗ್​ನಲ್ಲಿ ರೈಲೇ ಕೆಲ ಕಾಲ ನಿಂತು ವಾಹನಗಳಿಗೆ ಹೋಗಲು ದಾರಿ ಮಾಡಿಕೊಟ್ಟ ಪ್ರಸಂಗ ಇದಾಗಿದೆ.

    ಈ ಘಟನೆ ನಡೆದಿರುವುದು ಉತ್ತರ ಪ್ರದೇಶದ ವಾರಣಾಸಿಯ ಬನಾರಸ್​ನಲ್ಲಿ. ಭಾರೀ ಪ್ರಮಾಣದ ವಾಹನಗಳು ರೈಲ್ವೆ ಕ್ರಾಸಿಂಗ್​ನಲ್ಲಿ ಜಮಾಯಿಸಿದ್ದರಿಂದ ಟ್ರಾಫಿಕ್ ಜಾಮ್​ ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅದೇ ಸಮಯದಲ್ಲಿ ಬರುತ್ತಿದ್ದ ರೈಲನ್ನು ನಿಲ್ಲಿಸಿ ವಾಹನಗಳು ಹೋಗಲು ದಾರಿ ಮಾಡಿಕೊಡಲಾಗಿದೆ. ಪೊಲೀಸ್​ ಟ್ರಾಫಿಕ್​ ಕ್ಲಿಯರ್​ ಮಾಡಲು ಹರಸಾಹಸ ಮಾಡುತ್ತಿರುವ ದೃಶ್ಯವನ್ನು ನೀವು ವಿಡಿಯೋದಲ್ಲಿ ನೋಡಬಹುದು. ಬಾಲಾ ಎಂಬ ಹೆಸರಿನ ಎಕ್ಷ್​ (ಟ್ವಿಟರ್​) ಖಾತೆಯಲ್ಲಿ ಆ. 13ರಂದು ವಿಡಿಯೋ ಪೋಸ್ಟ್​ ಮಾಡಲಾಗಿದೆ. ಕೇವಲ ಮೂರೇ ದಿನದಲ್ಲಿ ಈ ವಿಡಿಯೋವನ್ನು 9 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ. 11 ಸಾವಿರಕ್ಕೂ ಹೆಚ್ಚು ಮಂದಿ ವಿಡಿಯೋವನ್ನು ಲೈಕ್​ ಮಾಡಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *