Connect with us

    KARNATAKA

    ಟ್ರಾನ್ಸಫಾರ್ಮರ್ ಸ್ಪೋಟಗೊಂಡು ಗಾಯಗೊಂಡಿದ್ದ ಯುವತಿ ಸಾವು

    ಬೆಂಗಳೂರು ಮಾರ್ಚ್ 24: ಬೈಕ್ ನಲ್ಲಿ ಹೋಗುತ್ತಿರುವ ಸಂದರ್ಭ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಇಂದು ಮೃತಪಟ್ಟಿದ್ದಾರೆ.


    ಮನೆಯಲ್ಲಿ ಮದುವೆ ಕಾರ್ಯಕ್ರಮವಿದ್ದ ಕಾರಣ ಬಟ್ಟೆ ಖರೀದಿಗೆ ಮಗಳೊಂದಿಗೆ ಉಲ್ಲಾಳ ಉಪನಗರಕ್ಕೆ ಬಂದು ಬಟ್ಟೆ ಖರೀದಿ ಮಾಡಿಕೊಂಡು ಅಪ್ಪ-ಮಗಳು ಬೈಕ್‍ನಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಮಂಗನಹಳ್ಳಿ ಬ್ರಿಡ್ಜ್ ಬಳಿ ಸಡನ್ ಆಗಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ಸ್ಫೋಟದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಭಸ್ಮವಾಗಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ತಂದೆ ಶಿವರಾಜು, ಮಗಳು ಚೈತನ್ಯರನ್ನು ಸ್ಥಳೀಯರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆ ರವಾನಿಸಿದ್ದರು. ಆದರೆ ತಡರಾತ್ರಿ 2:15ರ ಸುಮಾರಿಗೆ ಚೈತನ್ಯ(19) ಕೂಡ ಸಾವನ್ನಪ್ಪಿದ್ದಾರೆ.

    ಬುಧವಾರ ಈ ಘಟನೆ ಸಂಬಂಧ ಶಿವರಾಜು ಸಂಬಂಧಿಕರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply