Connect with us

LATEST NEWS

ಮೊದಲ ಬಾರಿಗೆ ಮತ ಚಲಾಯಿಸಿದ ಮಂಗಳಮುಖಿಯರು

ಮೊದಲ ಬಾರಿಗೆ ಮತ ಚಲಾಯಿಸಿದ ಮಂಗಳಮುಖಿಯರು

ಮಂಗಳೂರು ಮೇ 12: ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲಿ 100 ಮಂಗಳಮುಖಿಯರು ಮತದಾನಕ್ಕೆ ಅವಕಾಶ ಪಡೆದಿದ್ದು, ಆ ಪೈಕಿ ಸುಮಾರು 14 ಮಂದಿ ಶನಿವಾರ ಬೆಳಗ್ಗೆ ನಗರದ ಮಿಲಾಗ್ರಿಸ್ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಲು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿದ ಮಂಗಳಮುಖಿಯರು ಸರತಿ ಸಾಲಿನಲ್ಲೇ ನಿಂತು ಮತ ಚಲಾಯಿಸಿದರು.

ಈ ಸಂದರ್ಭ ಮಂಗಳಮುಖಿ ಸಂಜನಾ ಎಂಬವರು ಸುದ್ದಿಗಾರರೊಂದಿಗೆ ಮಾತನಾಡಿ ‘ನಾವು ಮತದಾನ ಮಾಡಲು ಬೇಡಿಕೆ ಸಲ್ಲಿಸುತ್ತಲೇ ಇದ್ದೆವು. ಆದರೆ, ಅವಕಾಶ ಸಿಕ್ಕಿರಲಿಲ್ಲ. ಇದೇ ಮೊದಲ ಬಾರಿಗೆ ಈ ಒಂದು ಅವಕಾಶ ಸಿಕ್ಕಿದೆ. ಹಾಗಾಗಿ ನಮಗೆ ಇಂದು ಸ್ವಾತಂತ್ರ ಸಿಕ್ಕಿದೆ ಎನ್ನಬಹುದು. ಈ ಸಂತಸದ ಕ್ಷಣವನ್ನು ನಾವು ಎಂದೂ ಕೂಡಾ ಮರೆಯಲು ಸಾಧ್ಯವಿಲ್ಲ’ ಎಂದರು.

ಬೆಳ್ತಂಗಡಿ ಕ್ಷೇತ್ರದಲ್ಲಿ 1, ಮೂಡುಬಿದಿರೆಯಲ್ಲಿ 13, ಮಂಗಳೂರು ನಗರ ಉತ್ತರದಲ್ಲಿ 8, ಮಂಗಳೂರು ನಗರ ದಕ್ಷಿಣದಲ್ಲಿ 56, ಮಂಗಳೂರು ಕ್ಷೇತ್ರದಲ್ಲಿ 13, ಬಂಟ್ವಾಳದಲ್ಲಿ 6, ಪುತ್ತೂರಿನಲ್ಲಿ 3 ಮಂಗಳಮುಖಿಯರು ಮತದಾನಕ್ಕೆ ಅರ್ಹತೆ ಪಡೆದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *