Connect with us

  KARNATAKA

  ಹಾಸನ – ಬೈಕ್ ಮೇಲೆ ಬಿದ್ದ ಮರ…ನೂರಾರು ಜನರ ಎದುರೇ ನರಳಿ ಪ್ರಾಣ ಬಿಟ್ಟ ಸವಾರ…!!

  ಹಾಸನ ಅಗಸ್ಟ್ 07: ಮಳೆಯಿಂದಾಗಿ ಬೈಕ್ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಸವಾರ ನರಳಿ ನರಳಿ ಪ್ರಾಣ ಬಿಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ.


  ಮೃತರನ್ನು ಕಲ್ಲೇಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (40) ಮೃತ ದುರ್ದೈವಿ ಎಂದು ತಿಳಿದುಬಂದಿದ್ದು, ಚನ್ನರಾಯಪಟ್ಟಣದಿಂದ ಬೈಕ್‍ನಲ್ಲಿ ಕಲ್ಲೇಸೋಮನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಬೃಹತ್ ಗಾತ್ರದ ಮರವೊಂದು ರಂಗಶೆಟ್ಟಿ ಮೇಲೆ ಬಿದ್ದಿದೆ. ಬೈಕ್ ಹಾಗೂ ಮರದ ನಡುವೆ ಸಿಲುಕಿದ ರಂಗಶೆಟ್ಟಿ ಅರ್ಧಗಂಟೆಗೂ ಹೆಚ್ಚು ಹೊತ್ತು ನರಳಾಡಿ ರಕ್ಷಿಸುವಂತೆ ಅಂಗಲಾಚಿದ್ದಾರೆ.

   

  ಈ ವೇಳೆ ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿದ್ದು, ರಂಗಶೆಟ್ಟಿಯನ್ನು ರಕ್ಷಿಸಲು ಮಾತ್ರ ಸಾಧ್ಯವಾಗಿಲ್ಲ. ಸ್ಥಳಕ್ಕೆ ಆಸ್ಪತ್ರೆಯ ಸಿಬ್ಬಂದಿ ಬಂದು ಪ್ರಥಮ ಚಿಕಿತ್ಸೆ ನೀಡಿದ್ದಾದರೂ ಜೀವಂತವಾಗಿ ಉಳಿಸಲು ಸಾಧ್ಯವಾಗಲಿಲ್ಲ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ

  Share Information
  Advertisement
  Click to comment

  You must be logged in to post a comment Login

  Leave a Reply