DAKSHINA KANNADA
ಕಾಸರಗೋಡು – ಮರ ಬಿದ್ದು ಶಾಲಾ ಬಾಲಕಿ ಸಾವು

ಕಾಸರಗೋಡು ಜುಲೈ 03: ಸುರಿಯುತ್ತಿರುವ ಭಾರಿ ಮಳೆಗೆ ಬಾಲಕಿಯೊಬ್ಬಳ ಮೇಲೆ ಮರವೊಂದು ಬಿದ್ದು ಬಾಲಕಿ ಸಾವನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತರನ್ನು ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಆಯಶತ್ ಮಿನ್ಹಾ ಎಂದು ಗುರುತಿಸಲಾಗಿದೆ.
ಸಂಜೆ 4 ಗಂಟೆಗೆ ತರಗತಿಗಳು ಮುಗಿದ ಕೂಡಲೇ ಶಾಲೆಯ ಹೊರಗೆ ಈ ಘಟನೆ ನಡೆದಿದೆ. ಆಯ್ಷತ್ ಮತ್ತು ಆಕೆಯ ಇಬ್ಬರು ಸ್ನೇಹಿತರು ಶಾಲಾ ಬಸ್‌ಗೆ ನಡೆದುಕೊಂಡು ಹೋಗುತ್ತಿದ್ದಾಗ ಮರದ ಕೊಂಬೆಯೊಂದು

ಆಕೆಯ ತಲೆಯ ಮೇಲೆ ಬಿದ್ದಿದೆ ಎಂದು ಶಿಕ್ಷಕರೊಬ್ಬರು ತಿಳಿಸಿದ್ದಾರೆ. ಉಳಿದ ಇಬ್ಬರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿಕ್ಷಕರು ಆಕೆಯನ್ನು 15 ಕಿಮೀ ದೂರದ ಕುಂಬಳದ ಸಹಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು. ಆಯ್ಷತ್ ತನ್ನ ಪೋಷಕರು ಮತ್ತು ಮೂವರು ಒಡಹುಟ್ಟಿದವರನ್ನು ಅಗಲಿದ್ದಾರೆ ಎಂದು ಶಿಕ್ಷಕರು ತಿಳಿಸಿದ್ದಾರೆ.