Connect with us

DAKSHINA KANNADA

ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ – ರಸ್ತೆ ಸಂಚಾರಕ್ಕೆ ತಡೆ

ಕಡಬ ಫೆಬ್ರವರಿ 8 : ಬೃಹತ್ ಮರವೊಂದು ರಸ್ತೆಗೆ ಅಡ್ಡವಾಗಿ ಮುರಿದು ಬಿದ್ದ ಕಾರಣ ಗುಂಡ್ಯ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯುಂಟಾಗಿದೆ.


ನಿನ್ನೆ ರಾತ್ರಿ ಸಂದರ್ಭ ಈ ಘಟನೆ ನಡೆದಿದ್ದು, ಮರ ತೆರವು ಕಾರ್ಯಾಚರಣೆ ಆರಂಭಗೊಂಡಿದೆ. ಬೆಂಗಳೂರಿನಿಂದ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಇದಾಗಿದೆ. ಗುಂಡ್ಯ ಅರಣ್ಯ ಕಚೇರಿಯ ಬಳಿ ಬೃಹತ್ ಮರ ಮುರಿದು ಬಿದ್ದ ಕಾರಣ ಸಂಚಾರಕ್ಕೆ ತೊಡಕಾಗಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ವಿದ್ಯುತ್ ಲೈನ್ ಗೂ ಹಾನಿಯಾಗಿದ್ದು, ಅರಣ್ಯಾಧಿಕಾರಿಗಳು ಮರವನ್ನು ತೆರವುಗೊಳಿಸುತ್ತಿದ್ದಾರೆ.