BANTWAL
ಸರಪಾಡಿ ಶ್ರೀ ಶರಭೇಶ್ವರನ ಪವಾಡ- ಬೃಹತ್ ಗಾತ್ರದ ಅಶ್ವತ್ಥ ಮರ ಉರುಳಿ ಬಿದ್ದರೂ ಯಾವುದೇ ಹಾನಿ ಆಗಿಲ್ಲ…!!

ಬಂಟ್ವಾಳ ಪೆಬ್ರವರಿ 09: ಬೃಹತ್ ಗಾತ್ರದ ಅರಳಿ ಮರವೊಂದು ಧರೆಗುರುಳಿದ ಪರಣಾಮ ವಿದ್ಯುತ್ ಕಂಬಗಳು ಧರೆಗುರಳಿ ರಸ್ತೆ ಸಂಚಾರದಲ್ಲಿ ಕೆಲ ಹೊತ್ತು ವ್ಯತ್ಯಯ ಉಂಟಾದ ಘಟನೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ರಥಬೀದಿಯಲ್ಲಿ ನಡೆದಿದೆ
ಬೆಳಗ್ಗೆ ಜನಸಂಚಾರ ಹಾಗೂ ವಾಹನ ಸಂಚಾರ ಹೆಚ್ಚಿರುವ ಸಮಯವಾದರೂ, ಯಾವುದೇ ಜೀವಹಾನಿ ಉಂಟಾಗಿಲ್ಲ. ಕಳೆದೆರಡು ದಿನಗಳಲ್ಲಿ ಮರದ ರೆಂಬೆಗಳು ಬಿದ್ದಿದ್ದು, ಆಗಲೂ ಯಾವುದೇ ಹಾನಿ ಉಂಟಾಗಿಲ್ಲ.
ಗುರುವಾರ ಬೆಳಗ್ಗಿನ ಹೊತ್ತು ಮರ ಏಕಾಏಕಿ ಬುಡದ ಭಾಗದಲ್ಲಿ ತುಂಡಾಗಿ ಬಿದ್ದಿದ್ದು, ವಿದ್ಯುತ್ ಕಂಬಗಳು ಧರೆಗುರುಳಿರುವುದು ಬಿಟ್ಟರೆ, ಪಕ್ಕದಲ್ಲಿದ್ದ ಪ್ರಯಾಣಿಕರ ತಂಗುದಾಣ, ಅಂಗಡಿಗೆ ಯಾವುದೇ ಹಾನಿಯಾಗಿಲ್ಲ. ಮರ ಬೀಳುವ ಕೆಲ ಹೊತ್ತಿನ ಮೊದಲೇ ಶಾಲಾ ಬಸ್ಸುಗಳು, ಇತರ ವಾಹನಗಳು ಮರ ಬಿದ್ದಿರುವ ಭಾಗದಲ್ಲೇ ಹಾದು ಹೋಗಿದ್ದವು.

ಜತೆಗೆ ಬೀಳುವ ಹೊತ್ತಿನಲ್ಲೂ ದೂರದಲ್ಲಿ ದ್ವಿಚಕ್ರ ವಾಹನಗಳು ಅದೇ ಭಾಗಕ್ಕೆ ಆಗಮಿಸುತ್ತಿತ್ತು. ಬೀಳುವ ಹೊತ್ತಿನಲ್ಲಿ ಜೋರಾದ ಶಬ್ದ ಕೇಳಿಬಂದಿದ್ದು, ತಂಗುದಾಣದಲ್ಲಿ ಕೂತವರು ಕೂಡ ಬೀಳುತ್ತಿದ್ದಂತೆ ಹೆದರಿ ದೂರಕ್ಕೆ ಓಡಿದ್ದಾರೆ.