LATEST NEWS
ತ್ರಿಪುರಾ – ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಪ್ಲವ್ ಕುಮಾರ್ ದೇವ್
ತ್ರಿಪುರಾ ಮೇ 14: ಮಹತ್ತರ ಬೆಳವಣಿಗೆಯೊಂದರಲ್ಲಿ ತ್ರಿಪುರಾದ ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಚುನಾವಣೆಗೆ ಇನ್ನು ಒಂದು ವರ್ಷ ಇರುವ ಸಂದರ್ಭದಲ್ಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಭಾರೀ ಕುತೂಹಲ ಮೂಡಿಸಿದೆ.ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಒಂದು ದಿನದ ಬಳಿಕ ಬಿಪ್ಲವ್ ಕುಮಾರ್ ದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಬಿಜೆಪಿ ವರಿಷ್ಠರ ನಿರ್ಧಾರವಾಗಿದೆ ಎಂದು ಮೂಲಗಳು ತಿಳಿಸಿದ್ದು, ಬಿಜೆಪಿ ಶಾಸಕರು ತ್ರಿಪುರಾದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ.