LATEST NEWS
ಹಿಂದೂಗಳ ಮೇಲೆ ದಾಳಿ – ಬಾಂಗ್ಲಾದೇಶ ಪ್ರಜೆಗಳಿಗೆ ಚಿಕಿತ್ಸೆ ನೀಡದೇ ಇರಲು ಆಸ್ಪತ್ರೆಗೆಳ ನಿರ್ಧಾರ
ಕೋಲ್ಕತಾ ಡಿಸೆಂಬರ್ 1: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಭಾರತದ ರಾಷ್ಟ್ರಧ್ವಜಕ್ಕೆ ಅವಮಾನದ ಘಟನೆ ಯನ್ನು ಖಂಡಿಸಿ, ಯಾವುದೇ ಬಾಂಗ್ಲಾದೇಶದ ನಾಗರಿಕರಿಗೆ ಚಿಕಿತ್ಸೆ ನೀಡದೇ ಇರಲು ಕೋಲ್ಕತಾ ಮತ್ತು ತ್ರಿಪುರಾ ರಾಜಧಾನಿ ಅಗರ್ತಲಾದ ಎರಡು ಖಾಸಗಿ ಆಸ್ಪತ್ರೆಗಳು ನಿರ್ಧರಿಸಿವೆ.
ಈ ಕುರಿತು ಮಾಹಿತಿ ನೀಡಿರುವ ಕೋಲ್ಕತಾ ಜೆ.ಎನ್.ರೇ ಆಸ್ಪತ್ರೆಯ ಅಧಿಕಾರಿಯೊಬ್ಬರು, ‘ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ, ಲೂಟಿಯಂಥ ಪ್ರಕರಣಗಳು ಹೆಚ್ಚುತ್ತಿವೆ. ಜೊತೆಗೆ ಭಾರತದ ರಾಷ್ಟ್ರಧ್ವಜಅವಮಾನಿಸುವಂಥ ಘಟನೆಗಳೂ ನಡೆಯುತ್ತಲೇ ಇವೆ. ಇದನ್ನು ಖಂಡಿಸಿ ಭಾನುವಾರದಿಂದಲೇ ಯಾವುದೇ ಬಾಂಗ್ಲಾ ಪ್ರಜೆಗಳನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದೇ ಇರಲು ನಿರ್ಧರಿಸಲಾಗಿದೆ. ಜೊತೆಗೆ ನಗರದ ಉಳಿದ ಆಸ್ಪತ್ರೆಗಳು ಇದೇ ನೀತಿ ಪಾಲಿಸಬೇಕು ಎಂದು ಕರೆ ನೀಡಿದ್ದಾರೆ. ಮತ್ತೊಂದೆಡೆ ಅರ್ಗತಲಾದ ಐಎಲ್‌ಎಸ್ ಆಸ್ಪತ್ರೆ ಕೂಡಾ ಇದೇ ನಿರ್ಧಾರ ಕೈಗೊಂಡಿದೆ. ಈ ಎರಡೂ ಆಸ್ಪತ್ರೆಗಳು ಬಾಂಗ್ಲಾ ಗಡಿಗೆ ಹೊಂದಿಕೊಂಡಿರುವ ಕಾರಣ ಮತ್ತು ಅಗ್ಗದ ದರದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಬಾಂಗ್ಲಾದೇಶಿಯರನ್ನು ಸೆಳೆಯುತ್ತಿವೆ.