LATEST NEWS
ಟ್ರೋಲ್ ಕಿಂಗ್ 193 ಎಂಬ ಇನ್ಸ್ಟಾಗ್ರಾಂ ಪೇಜ್ ನ ಎಡ್ಮಿನ್ ಪೊಲೀಸ್ ವಶಕ್ಕೆ….!!

ಮಂಗಳೂರು ಫೆಬ್ರವರಿ 25:ಟ್ರೋಲ್ ಕಿಂಗ್ 193 ಎಂಬ ಇನ್ಸ್ಟಾಗ್ರಾಂ ಪೇಜ್ ನ ಎಡ್ಮಿನ್ ನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರ್ಮಿಕ ಕೇಂದ್ರಗಳ ಕುರಿತು ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ಕುರಿತಂತೆ ದೂರು ದಾಖಲಾದ ಹಿನ್ನಲೆ ಪೇಜ್‌ನ ಅಡ್ಮಿನ್, ಅಪ್ರಾಪ್ತ ವಯಸ್ಸಿನ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ತನ್ನ ಇನ್‌ಸ್ಟ್ರಾಗ್ರಾಂ ಪೇಜ್‌ನ ಮೂಲಕ ಈ 17ರ ಹರೆಯದ ಯುವಕ ಎಡಿಟ್ ಮಾಡಿದ ವೀಡಿಯೋಗಳನ್ನು ಅಪ್‌ಲೋಡ್ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದ್ದು, ಅಪ್ರಾಪ್ತ ವಯಸ್ಕ ಆಗಿರುವ ಕಾರಣ ಆತನನ್ನು ಬಾಲ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ ಎಂದರು.
