Connect with us

DAKSHINA KANNADA

ಟ್ರಕ್ ಮತ್ತು ಮಿನಿ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು

ಪುತ್ತೂರು ಎಪ್ರಿಲ್ 5: ಟ್ರಕ್ ಹಾಗೂ ಮಿನಿ ಟೆಂಪೋ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಿನಿ ಟೆಂಪೋ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ.


ಮೃತರನ್ನು ಬಂಟ್ವಾಳ ತಾಲೂಕು ಕುಕ್ಕಾಜೆ ಮೂಲದ ಹನೀಫ್ ಎಂದು ಗುರುತಿಸಲಾಗಿದೆ. ಎಳನೀರು ಹೇರಿಕೊಂಡು ಬರುತ್ತಿದ್ದ ಟ್ರಕ್ ಮತ್ತು ಹಾಸನಕ್ಕೆ ಬೀಡಿ ವ್ಯಾಪಾರಕ್ಕಾಗಿ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ದೋಸ್ತ್ ನಡುವೆ ಶಿರಾಡಿ ಗ್ರಾಮದ ಉದಾನೆ ಪರವರ ಕೊಟ್ಯ ಎಂಬಲ್ಲಿ ಈ ಅಪಘಾತ ನಡೆದಿದೆ.

ಅಶೋಕ್ ಲೈಲ್ಯಾಂಡ್ ದೋಸ್ತ್ ನ ಚಾಲಕ ಹನೀಫ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಅದೇ ಗಾಡಿಯಲ್ಲಿದ್ದ ರಫೀಕ್ ಮತ್ತು ಕರೀಮ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.