DAKSHINA KANNADA
ಶಿರಾಡಿ ಘಾಟ್‌ನಲ್ಲಿ ಮಂಗಳೂರಿಗೆ ಅಕ್ಕಿ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ..!
ಉಪ್ಪಿನಂಗಡಿ : ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹಾಸನದ ಶಿರಾಡಿ ಘಾಟ್‌ನಲ್ಲಿ ಸಂಭವಿಸಿದೆ.
ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಟ್ರಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್, ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ,ಅಪಾಯದಿಂದ ಪಾರಾಗಿದ್ದಾರೆ. ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಸಂಪೂರ್ಣ ಸುಟ್ಟು ಹೋಗಿದೆ. ಹಾಸನದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಆದ್ರೂ ಲಾರಿ ,ಸರಕಿನ ಸಮೇತ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ . ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಕೆಲ ಹೊತ್ತು ಅಡಚಣೆ ಉಂಟಾಗಿತ್ತು.
You must be logged in to post a comment Login