LATEST NEWS
ಕೊನೆಗೂ ಅಂತ್ಯವಾಗುತ್ತಾ ರಷ್ಯಾ ಯುಕ್ರೇನ್ ವಾರ್ -3 ವರ್ಷಗಳ ಬಳಿಕ ಮೊದಲ ಮಾತುಕತೆ

ಇಸ್ತಾಂಬುಲ್ ಮೇ 16: ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದ ಯುಕ್ರೇನ್ ಮತ್ತು ರಷ್ಯಾ ಯುದ್ದ ಬಹುತೇಕ ಕೊನೆಯಾಗುವ ಲಕ್ಷಣಗಳು ಕಾಣಿಸತೊಡಗಿದೆ.
ಯುರೋಪಿನ ಅತ್ಯಂತ ಭೀಕರ ಸಂಘರ್ಷವನ್ನು ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಒತ್ತಡಕ್ಕೆ ಮಣಿದಿರುವ ರಷ್ಯಾದ ಅಧ್ಯಕ್ಷ ಬ್ಲಾದಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್ಸ್ಕಿ ಅವರು 3 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಶಾಂತಿ ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಟರ್ಕಿ, ಅಮೆರಿಕ ಮತ್ತು ಉಕ್ರೇನ್ ಅಧಿಕಾರಿಗಳ ನಡುವೆ ಸಭೆ ನಡೆಯಲಿದೆ. ಇದಾದ ಬಳಿಕ ಟರ್ಕಿ, ರಷ್ಯಾ ಮತ್ತು ಉಕ್ರೇನ್ ನಿಯೋಗಗಳ ನಡುವೆ ಮಾತುಕತೆ ನಡೆಯಲಿದೆ ಎಂದು ಟರ್ಕಿ ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.

ಯುದ್ಧವನ್ನು ಕೊನೆಗೊಳಿಸುವ ಸಲುವಾಗಿ ಮಾತುಕತೆ ನಡೆಸಲು ಇಸ್ತಾನ್ಬುಲ್ನಲ್ಲಿ ಪುಟಿನ್ ಅವರನ್ನು ಭೇಟಿ ಮಾಡಲು ಸಿದ್ಧ ಎಂದು ಈಚೆಗೆ ಝಲೆನ್ಸ್ಕಿ ಹೇಳಿದ್ದರು. ಪ್ರಸ್ತಾವಿತ ಉಕ್ರೇನ್-ರಷ್ಯಾ ಶಾಂತಿ ಮಾತುಕತೆಯಲ್ಲಿ ಪಾಲ್ಗೊಳ್ಳಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೂ ಮುಂದಾಗಿದ್ದಾರೆ. ಮಾತುಕತೆಯಲ್ಲಿ ಪಾಲ್ಗೊಳ್ಳುವುದಕ್ಕೆ ಸಂಬಂಧಿಸಿದಂತೆ ರಷ್ಯಾ ಹೆಚ್ಚಿನ ವಿವರಗಳನ್ನು ಬಿಟ್ಟುಕೊಟ್ಟಿಲ್ಲ.