Connect with us

    LATEST NEWS

    ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ- ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್

    ಕಾಪು, ಮೇ 17: ಕಾಪು‌ಲೈಟ್ ಹೌಸ್ ಗಿಂತ 15 ಕಿ.ಮೀ ದೂರದಲ್ಲಿ ಬಂಡೆಗೆ ಸಿಲುಕಿ ಅಪಘಾತಕ್ಕೀಡಾದ ಕೋರಮಂಡಲ ಎಕ್ಸ್‌ಪ್ರೆಸ್‌ ಪ್ರೆಸ್ ವೆಸೆಲ್ ಟಗ್ ನಲ್ಲಿ‌ ಸಿಲುಕಿರುವ 9 ಮಂದಿ ಸಿಬ್ಬಂದಿಗಳನ್ನು ರಕ್ಷಣೆ ಮಾಡಲಾಗಿದೆ.

    ಇಂದು ಬೆಳಗ್ಗೆ ಆಗಮಿಸಿದ ನೌಕಾಪಡಯ ಹೆಲಿಕಾಪ್ಟರ್ ಮೂಲಕ ಎಲ್ಲರನ್ನೂ ಏರ್ ಲಿಫ್ಟ್ ಮಾಡಿ, ಕೋಸ್ಟ್ ಗಾರ್ಡ್ ನ ವರಾಹ ನೌಕೆಯ ಮೂಲಕ ದಡಕ್ಕೆ ಕರೆತರಲಾಗುತ್ತಿದೆ. ಸದ್ಯ ಎಲ್ಲಾ ಒಂಬತ್ತು ಮಂದಿ ಕಾರ್ಮಿಕರನ್ನು ಎನ್ ಎಂಪಿಟಿ ಬಂದರಿಗೆ ಕರೆತರಲಾಗುತ್ತಿದೆ. ಕಾರ್ಮಿಕರ ಆರೋಗ್ಯದ ತಪಾಸಣೆಗೆ ವೈದ್ಯರ ತಂಡ ಸಜ್ಜಾಗಿದೆ.

    ಎನ್‌ಎಂಪಿಟಿ ಬಂದರಿನ ಹೊರವಲಯದ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಚಂಡಮಾರುತದ ಪರಿಣಾಮ ಆಯಂಕರ್ ತುಂಡಾಗಿ ತೇಲಿ ಬಂದು, ಕಾಪು ಬಳಿಯಲ್ಲಿ ಅಪಘಾತಕ್ಕೊಳಗಾದ ಕೋರಮಂಡಲ ಎಕ್ಸ್ ಪ್ರೆಸ್ ವೆಸೆಲ್ ಟಗ್ ನಲ್ಲಿ ಒಂಬತ್ತು ಮಂದಿ ಸಿಬ್ಬಂದಿಗಳಿದ್ದರು.

    ಶುಕ್ರವಾರ ಬೆಳಗ್ಗೆ11.30 ರಿಂದ ಕಡಲಲ್ಲಿ ತೇಲುತ್ತಿರುವ ಕೋರಮಂಡಲ ಎಕ್ಸ್‌ಪ್ರೆಸ್‌ ಟಗ್ ಶನಿವಾರ ಬೆಳಗ್ಗೆ 8.30 ಕ್ಕೆ ಕಾಪು ಲೈಟ್ ಬಳಿಯಿಂದ ಸುಮಾರು ಹದಿನೈದು ಕಿಲೋ ಮೀಟರ್ ದೂರದ ಕಾಪು ಪಾರ್ ಬಳಿ ಬಂಡೆಗೆ ಢಿಕ್ಕಿ ಹೊಡೆದು ನಿಂತಿರುವುದು ಪತ್ತೆಯಾಗಿತ್ತು.

    ಟಗ್ ನಲ್ಲಿ ಇರುವ 9 ಮಂದಿ ಸಿಬಂದಿಗಳು ತಮ್ಮ ಜೀವನದ ಅತ್ಯಮೂಲ್ಯವಾದ ಸುಮಾರು 44 ಗಂಟೆಗಳನ್ನು‌ ಈಗಾಗಲೇ ಸಮುದ್ರ ಮಧ್ಯದಲ್ಲೇ ಕಳೆದಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply