Connect with us

    DAKSHINA KANNADA

    ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ರಾಜ್ಯಭಾಷೆಯಾಗಿ ತುಳು – ಶಾಸಕ ಅಶೋಕ್ ರೈ

    ಪುತ್ತೂರು ಜುಲೈ 21: ರಾಜ್ಯದಲ್ಲಿ ತುಳು ಭಾಷೆಯನ್ನು 2ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.


    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ – ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ 2ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು 2ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬAಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು. ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.

    ಸೋಷಿಯಲ್ ಮೀಡಿಯಾದ ಅಬ್ಬರದ ನಡುವೆಯೇ ಜನ ಪತ್ರಿಕೆ ಓದುವುದು ಕಡಿಮೆ ಮಾಡಿಲ್ಲ. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಬೇಕು. ಅದಿರುವ ಕಾರಣವೇ ದಕ್ಷಿಣಕನ್ನಡದ ಪತ್ರಕರ್ತರು ಎಲ್ಲಿ ಹೋದರೂ ಛಾಪು ಮೂಡಿಸುತ್ತಾರೆ ಎಂದು ಹೇಳಿದರು. ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರö್ಯ ಮತ್ತು ಪತ್ರಿಕಾ ಸ್ವಾತಂತ್ರ್ಯ ದಮನ ಮಾಡಲಾಗಿತ್ತು. ಆಗ ಧೀಮಂತ ಪತ್ರಿಕೆಗಳು ಭೂಗತರಾಗಿದ್ದುಕೊಂಡೇ ಪತ್ರಿಕೆ ನಡೆಸಿ ಜನಜಾಗೃತಿ ಮೂಡಿಸಿದ್ದರು. ದೇಶ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಬಹಳಷ್ಟು ದೊಡ್ಡದು. ಸೋಷಿಯಲ್ ಮೀಡಿಯಾದಿಂದ ಉಪಯೋಗವಿದೆಯಾದರೂ ಅಷ್ಟೇ ಕೆಟ್ಟದೂ ಇದೆ ಎಂದರು.


    ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಉಪನ್ಯಾಸ ನೀಡಿದರು. ಮಾಧ್ಯಮ ವರದಿ ಇವತ್ತು ಪ್ರತಿಯೊಬ್ಬರ ಕೈಗೂ ಬಂದಿದೆ. ಜಗತ್ತಿನಲ್ಲಿ ಜೀವರಕ್ಷಕ ಔಷಧಿ ಮೊದಲ ಸ್ಥಾನದಲ್ಲಿದ್ದರೆ, ೨ನೇ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳಿವೆ. ಇಷ್ಟಾದರೂ ಮಾಧ್ಯಮಗಳು ಕೆಲವೊಂದು ಅಪವಾದಗಳನ್ನು ಕೂಡ ಎದುರಿಸುತ್ತಿವೆ. ಆರೋಪಿಯೊಬ್ಬನನ್ನು ನ್ಯಾಯಾಲಯ ವಿಚಾರಣೆ ನಡೆಸುವ ಮೊದಲೇ ಮಾಧ್ಯಮಗಳು ವಿಚಾರಣೆ ನಡೆಸಿ ತಪ್ಪಿತಸ್ಥನೆಂದು ಘೋಷಿಸುವುದು ಆತಂಕಕಾರಿ ಬೆಳವಣಿಗೆ. ಅದೇ ರೀತಿ ಪೀತ ಪತ್ರಿಕೋದ್ಯಮದ ಬಗ್ಗೆಯೂ ಜಾಗೃತಿ ಅಗತ್ಯ ಎಂದರು. ಪ್ರತಿಯೊಬ್ಬ ಪತ್ರಕರ್ತರಿಗೂ ವೃತ್ತಿಪರತೆ ಮತ್ತು ನೈತಿಕತೆ ಅಗತ್ಯವಾಗಿ ಬೇಕು ಎಂದವರು ನುಡಿದರು. ಮಾಹಿತಿ ಎಂಬುದು ನೀರಿನ ಥರ. ಕಡಿಮೆಯಾದರೂ ಕಷ್ಟ, ಜಾಸ್ತಿಯಾದರೂ ಕಷ್ಟ. ಇದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
    ಇದೇ ಸಂದರ್ಭದಲ್ಲಿ ಶೇಟ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಕೊಡುಗೆಯಾಗಿ ನೀಡಿದ ಸಿಸಿ ಕ್ಯಾಮೆರಾವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪತ್ರಕರ್ತರಿಗೆ ಹಸ್ತಾಂತರ ಮಾಡಿದರು.
    ಪತ್ರಿಕಾ ವಿತರಕರಾದ ವಿಶ್ವನಾಥ್ ಪುತ್ತೂರು ಅವರನ್ನು ಶಾಸಕರು ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸಂಘದ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು.


    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್,ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವನಿಕೃಷ್ಣ, ಎಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ‍್ಸ್ (ಎಸಿಸಿಇ-ಐ) ಪುತ್ತೂರು ಸೆಂಟರ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಕೆ.ಕೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸುಧಾಕರ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯ ಮೇಘಾ ಪಾಲೆತ್ತಾಡಿ ಮತ್ತು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿ ವಚನಾ ಜಯರಾಂ,ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ,ಕಾರ್ಯಕಾರಿ ಸಮಿತಿ ಸದಸ್ಯರಾದ ಐ. ಬಿ. ಸಂದೀಪ್,ಕುಮಾರ್,ಪ್ರಸಾದ್ ಬಲ್ನಾಡ್, ಸಂಘದ ಕಾರ್ಯದರ್ಶಿ ಅಜಿತ್ ಕುಮಾರ್, ಸದಸ್ಯರಾದ ಅನಿಶ್ ಕುಮಾರ್ ಮರೀಲ್,ಶರತ್, ರಾಜೇಶ್ ಪಟ್ಟೆ, ಪಾರೂಕ್, ಮತ್ತಿತ್ತರರು ಉಪಸ್ಥಿತರಿದ್ದರು

    Share Information
    Advertisement
    Click to comment

    You must be logged in to post a comment Login

    Leave a Reply