LATEST NEWS
ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ಸಮಿತಿ ರಚನೆ
ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕರಾವಳಿಯ ಜನಪ್ರತಿನಿಧಿಗಳಿಗೆ ತುಳು ಭಾಷೆ ಬಗ್ಗೆ ಪ್ರೀತಿ ಬರಲಾರಂಭಿಸಿದ್ದು, ಇದೀಗ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ಸಮಿತಿ ರಚಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ಕುಮಾರ್, ‘ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ ಅಧ್ಯಯನ ನಡೆಸಿ ಸೂಕ್ತ ಶಿಫಾರಸಿನೊಂದಿಗೆ ವರದಿ ನೀಡಲು ಡಾ. ಮೋಹನ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ’ ಎಂದು ತಿಳಿಸಿದ್ದಾರೆ. ಅಲ್ಲದೆ, ಒಂದು ವಾರದಲ್ಲಿ ವರದಿ ನೀಡಲು ಈ ಸಮಿತಿಗೆ ಸೂಚಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರಿಸಬೇಕೆಂದು ತುಳು ಭಾಷಿಕರು ಅನೇಕ ವರ್ಷಗಳಿಂದ ಬೇಡಿಕೆ ಮುಂದಿಡುತ್ತಲೇ ಇದ್ದಾರೆ. ರಾಜ್ಯದ ಸಂಸದರು ಹಲವು ಬಾರಿ ಈ ವಿಚಾರವನ್ನು ಸಂಸತ್‌ನಲ್ಲಿ ಪ್ರಸ್ತಾಪಿಸಿದ್ದರು.