ಹಠತ್ತಾಗಿ ವೇದಿಕೆಯಲ್ಲೇ ಕುಸಿದು ಬಿದ್ದ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ : ಆಸ್ಪತ್ರೆಗೆ ದಾಖಲು

ಮಂಗಳೂರು, ಮಾರ್ಚ್ 15 : ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷರಾದ ಎ. ಸಿ.ಭಂಡಾರಿ ಅವರು ಹಠಾತ್ತಾಗಿ ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ನಡೆದಿದೆ.

ಮಂಗಳೂರಿನ ಪುರಭವನದಲ್ಲಿ ಈ ಘಟನೆ ಸಂಭವಿಸಿದ್ದು ಎ.ಸಿ.ಭಂಡಾರಿಯನ್ನು ನಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಗಳೂರಿನ ಪುರಭವದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ವತಿಯಿಂದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯವರ ವತಿಯಿಂದ ಮಾರ್ಚ್ 9 ರಿಂದ ಒಂದು ವಾರಗಳ ’ತುಳು ನಾಟಕ ಪರ್ಬ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕೊನೆಯ ದಿನವಾದ ಇಂದು ಸಮಾರೋಪ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಳ್ಳಲು ವೇದಿಕೆ ಹತ್ತಿದ ಭಂಡಾರಿ ಹಠತ್ತಾಗಿ ಕುಸಿದು ಬಿದ್ದಿದ್ದಾರೆ.

ಪಕ್ಕದಲ್ಲಿದ್ದವರು ಹಾಗೂ ಇತರ ಪ್ರಮುಖರು ಭಂಡಾರಿಯನ್ನು ಕೂಡಲೇ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಭಂಡಾರಿ ನಿರಂತರ ಓಡಾಟಗಳಿಂದ ಬಳಲಿದ್ದರು ಆದರೂ ತುಳು ನಾಟಕ ಪರ್ಬದ ಕಾರ್ಯಕ್ರಮದಲ್ಲಿ ದಿನಾ ಪಾಲ್ಗೊಳ್ಳುತ್ತಿದ್ದರು.

ಇದೇ ಬಳಲಿಕೆ ಬಂಡಾರಿ ಅವರು ಕುಸಿದು ಬೀಳಲು ಕಾರಣ ಎಂದು ಶಂಕಿಸಲಾಗಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.