LATEST NEWS
ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅವಘಡಕ್ಕೆ 3 ಬಲಿ

ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅವಘಡಕ್ಕೆ 3 ಬಲಿ
ಬೆಂಗಳೂರು ನವೆಂಬರ್ 3: ರಾಷ್ಟ್ರೀಯ ಹೆದ್ದಾರಿ 47ರಲ್ಲಿ ನಡೆದ ಬಸ್ ಲಾರಿ ನಡುವಿನ ಮುಖಾಮುಖಿ ಢಿಕ್ಕಿಯಲ್ಲಿ ಬಸ್ ಚಾಲಕ ಸೇರಿ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನಪ್ಪಿದ್ದಾರೆ.
ತುಮಕೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಂದು ಬೆಳ್ಳಂಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 47ರಲ್ಲಿ ನಡೆದ ಬಸ್ ಲಾರಿ ನಡುವಿನ ಮುಖಾಮುಖಿ ಢಿಕ್ಕಿಯಲ್ಲಿ ಬಸ್ ಚಾಲಕ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟು 8 ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

ಬೆಳಗಾವಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏಷ್ಯನ್ ಟೂರ್ ಟ್ರಾವೆಲ್ಸ್ ಬಸ್‌ನಲ್ಲಿ 38 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಇಂದು ಬೆಳಗ್ಗೆ 7.30ರ ಸುಮಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ 48ರ ಊರುಕೆರೆ ಸಮೀಪದ ರಂಗಾಪುರ ಬಳಿ ಮುಂದೆ ಲಕ್ಸ್ ಸೋಪುಗಳನ್ನು ತುಂಬಿ ಹೋಗುತ್ತಿದ್ದ ಲಾರಿಯನ್ನು ಹಿಂದಿಕ್ಕಿಲು ಬಸ್ ಅತಿ ವೇಗವಾಗಿ ಮುನ್ನುಗ್ಗಿದ್ದಾಗ ನಿಯಂತ್ರಣ ತಪ್ಪಿ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಪರಿಣಾಮ ಬಸ್ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ 8 ಮಂದಿ ಗಂಭೀರ ಗಾಯಗೊಂಡಿದ್ದಾರೆ. ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.