Connect with us

    BELTHANGADI

    ತುಮಕೂರು ಬೆಳ್ತಂಗಡಿಯ ಮೂವರ ಹತ್ಯೆ ಪ್ರಕರಣ : ಗೃಹ ಸಚಿವರನ್ನ ಭೇಟಿ ಮಾಡಿದ ರಕ್ಷಿತ್ ಶಿವರಾಂ..

    ಬೆಂಗಳೂರು : ತುಮಕೂರಿನಲ್ಲಿ ಬೆಳ್ತಂಗಡಿ ಮೂವರನ್ನು ದುಷ್ಕರ್ಮಿಗಳು ಕಾರಿಗೆ ಬೆಂಕಿ ಹಚ್ಚಿ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವರನ್ನುಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಪ್ರಕರಣದ ಗಂಭೀರತೆ ಅರಿತು ಉನ್ನತ ಮಟ್ಟದ ತನಿಖೆ ನಡೆಸಲು ಮನವಿ ಮಾಡಿದರು.

     

    ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲು ರಕ್ಷಿತ್ ಅವರು ಮನವಿ ಮಾಡಿದರು. ಅದಲ್ಲದೆ ಮೃತದೇಹದ ಡಿಎನ್ಎ ಪರೀಕ್ಷೆ ಮಾಡಿ ಆದಷ್ಟು ಬೇಗ ಕುಟುಂಬಕ್ಕೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲು ಮನವಿ ಮಾಡಿದರು. ಈ ವೇಳೆ ತುಮಕೂರು ಪೊಲೀಸ್ ಅಧಿಕಾರಿಯನ್ನು ಗೃಹ ಸಚಿವರು‌ ಕರೆ ಮಾಡಿ ಕರೆಸಿಕೊಂಡು ಪ್ರಕರಣದ ಬಗ್ಗೆ ಮಾಹಿತಿ ಪಡೆದರು. ಪೊಲೀಸ್ ಅಧಿಕಾರಿ ಪ್ರಕರಣದ ಎಲ್ಲಾ ಮಾಹಿತಿಯನ್ನು ವಿವರಿಸಿದ್ದು. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು. ಇನ್ನೂ ಒಂದೆ ಎರಡು ದಿನದಲ್ಲಿ ಪ್ರಕರಣದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ತಿಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ವೇಳೆ ದ.ಕ.ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಮತ್ತು ಬೆಳ್ತಂಗಡಿ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹಕಿಂ ಕೊಕ್ಕಡ ಜೊತೆಯಲ್ಲಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply