LATEST NEWS
ಟರ್ಕಿ – ಹೊಟೇಲ್ ನಲ್ಲಿ ಬೆಂಕಿ ಅನಾಹುತಕ್ಕೆ ಮಲಗಿದ್ದಲ್ಲೇ ಸುಟ್ಟು ಕರಕಲಾದ 76ಕ್ಕೂ ಅಧಿಕ ಪ್ರವಾಸಿಗರು

ಟರ್ಕಿ ಜನವರಿ 21: ಭೀಕರ ಬೆಂಕಿ ಅವಘಡಕ್ಕೆ 66ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್‌ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್‌ನ ರೆಸ್ಟೋರೆಂಟ್‌ನಲ್ಲಿ ನಡೆದಿದೆ.
ಬೆಳಗಿನ ಜಾವ 3.30ರ ಸುಮಾರಿಗೆ ಹೋಟೆಲ್ ಬೆಂಕಿಗೆ ಆಹುತಿಯಾಯಿತು. ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ. ರೆಸಾರ್ಟ್ನಲ್ಲಿದ್ದವರು ಕೆಲವರು ಭಯಭೀತರಾಗಿ ಕಟ್ಟಡದಿಂದ ಹಾರಿ ಸಾವನ್ನಪ್ಪಿದ್ದಾರೆ. ಕೆಲವು ಜನರು ಬೆಡ್ರೂಂನ ಬೆಡ್ಶೀಟ್ಗಳನ್ನು ಬಳಸಿ ತಮ್ಮ ಕೋಣೆಗಳಿಂದ ಕೆಳಗೆ ಇಳಿಯಲು ಪ್ರಯತ್ನಿಸಿದ್ದಾರೆ. ಹೋಟೆಲ್‌ನಲ್ಲಿ 234 ಅತಿಥಿಗಳು ತಂಗಿದ್ದರು ಎಂದು ಸ್ಥಳೀಯ ಮಾಧ್ಯಮಗಳು ಹೇಳಿವೆ.

ಕಟ್ಟಡ ಕುಸಿಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದು ಹೋಟೆಲ್‍ನಲ್ಲಿದ್ದವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಈ ನಡುವೆ ಅಗ್ನಿ ಅವಘಡಕ್ಕೆ ಕಾರಣ ಏನೆಂಬ ಬಗ್ಗೆ ತನಿಖೆ ಮುಂದುವರೆದಿದ್ದು, ತನಿಖೆಗಾಗಿ 6 ಪ್ರಾಸಿಕ್ಯೂಟರ್‌ಗಳನ್ನು ಸರ್ಕಾರ ನೇಮಿಸಿದೆ.
ಏತನ್ಮಧ್ಯೆ ಕೇಂದ್ರ ಟರ್ಕಿಯಲ್ಲಿ ಇರುವ ಮತ್ತೊಂದು ಸ್ಕಿ ರೆಸಾರ್ಟ್‌ನ ಹೋಟೆಲ್‌ವೊಂದರಲ್ಲಿ ಅಡುಗೆ ಅನಿಲ ಸ್ಫೋಟಗೊಂಡಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
2 Comments