FILM
ಜಿಮ್ ನಲ್ಲಿರುವಾಗಲೇ ಹೃದಯಾಘಾತಕ್ಕೆ ಬಲಿಯಾದ ಹಿಂದಿ ಕಿರುತೆರೆ ನಟ ಸಿದ್ದಾಂತ ವೀರ್ ಸೂರ್ಯವಂಶಿ
ಮುಂಬೈ ನವೆಂಬರ್ 11: ಇತ್ತೀಚೆಗೆ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಿನೆಮಾ ರಂಗದಲ್ಲೂ ಕೆಲವು ನಟ ನಟಿಯರು ಹೃದಯಾಘಾತಕ್ಕೆ ಬಲಿಯಾಗಿದ್ದು, ಇದೀಗ ಹಿಂದಿ ಕಿರುತೆರೆ ನಟ ಸಿದ್ದಾಂತ್ ವೀರ್ ಸೂರ್ಯವಂಶಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಕುಸುಮ್, ವಾರಿಸ್ ಮತ್ತು ಸೂರ್ಯಪುತ್ರ ಕರ್ಣ್ನಂತಹ ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿದ್ದ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಶುಕ್ರವಾರ ಹೃದಯಾಘಾತದಿಂದ ನಿಧನರಾದರು.
ವರದಿಗಳ ಪ್ರಕಾರ, 46 ವರ್ಷದ ಜಿಮ್ನಲ್ಲಿ ವ್ಯಾಯಾಮ ಮಾಡುವಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದಾಗ್ಯೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.