Connect with us

FILM

ಯುಟ್ಯೂಬ್ ಚಾನೆಲ್‌ಗೆ 1000 ಸಬ್‌ಸ್ಕ್ರೈಬರ್ಸ್ ಆದ ತಕ್ಷಣ ಕಿರುತೆರೆ ನಟಿ ಜ್ಯೋತಿ ರೈ ವಿಡಿಯೊ ಅಪ್‌ಲೋಡ್ ಮಾಡುತ್ತೇನೆ ಎಂದ ವ್ಯಕ್ತಿ

ಬೆಂಗಳೂರು ಮೇ 08: ಕಿರುತೆರೆ ನಟಿ ಜ್ಯೋತಿ ರೈ ಅವರ ಅಶ್ಲೀಲ ವಿಡಿಯೋವನ್ನು ಅಪ್ಲೋಡ್ ಮಾಡುತ್ತೇನೆ ಎಂದು ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾನೆ. ಈ ಬಗ್ಗೆ ನಟಿ ಸೈಬರ್ ಕ್ರೈಂ ಗೆ ದೂರು ನೀಡಿದ್ದಾರೆ.


twitter.com/EDIT_BY_ABHI ಎನ್ನುವ ಟ್ವಿಟರ್‌ ಖಾತೆಯಲ್ಲಿ ‘Now jyothi rai videos are leaked #PrajwalRevanna #jyothirai’ ಎಂದು ಪೋಸ್ಟ್‌ ಮಾಡಲಾಗಿದೆ. ಇದೇ ಟ್ವಿಟರ್‌ ಖಾತೆಯಲ್ಲಿ ಜ್ಯೋತಿ ಅವರು ಸೀರೆ ಧರಿಸಿರುವ ಚಿತ್ರದೊಂದಿಗೆ ಆಕ್ಷೇಪಾರ್ಹ ಭಂಗಿಯಲ್ಲಿರುವ ಅಥವಾ ತಮ್ಮಲ್ಲಿರುವ ಖಾಸಗಿ ಫೋಟೋಗಳ ಪೈಕಿ ಒಂದನ್ನು ಅಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಬೇಗ ಸಬ್‌ಸ್ಕ್ರೈಬ್ ಮಾಡಿ, ನನ್ನ ಯುಟ್ಯೂಬ್ ಚಾನೆಲ್‌ಗೆ 1000 ಸಬ್‌ಸ್ಕ್ರೈಬರ್ಸ್ ಆದ ತಕ್ಷಣ ವಿಡಿಯೊ ಅಪ್‌ಲೋಡ್ ಮಾಡುತ್ತೇನೆ’ ಎಂದು ಮತ್ತೊಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.


ಈ ಕುರಿತಂತೆ ಜ್ಯೋತಿ ರೈ ಪ್ರತಿಕ್ರಿಯೆ ನೀಡದೇ ಇದ್ದರೂ, ಕೆಲವು ವ್ಯಕ್ತಿಗಳು ತಮ್ಮ ನಕಲಿ ಫೋಟೋ ಮತ್ತು ವಿಡಿಯೋಗಳನ್ನು ಶೇರ್ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈಗಾಗಲೇ ದೂರು ಕೂಡ ನೀಡಿರುವುದಾಗಿ ತಿಳಿಸಿದ್ದಾರೆ. ಹರಿದಾಡುತ್ತಿರುವ ಫೋಟೋ ಮತ್ತು ವಿಡಿಯೋಗಳು ಫೇಕ್ ಎಂದು ಅವರು ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟ ಪಡಿಸಿದ್ದಾರೆ. ಕೆಲವರ ನಂಬರ್ ನಿಂದ ನನಗೆ ಕರೆಗಳು ಬಂದಿದ್ದವು. ಅವರೇ ಇಂದು ನನ್ನದು ಎನ್ನಲಾಗುತ್ತಿರುವ ವಿಡಿಯೋ ಮತ್ತು ಫೋಟೋ ಕಳುಹಿಸಿದ್ದಾರೆ ಎಂದು ಬರೆದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *