Connect with us

LATEST NEWS

ಮಳೆಯಿಂದ ಜಿಲ್ಲೆ ಜಲಾವೃತವಾದರೂ ಟ್ವೀಟ್ ವಾರ್ ನಲ್ಲಿ ಸಂಸದರು ಹಾಗೂ ಮಾಜಿ ಸಿಎಂ

ಮಂಗಳೂರು ಸೆಪ್ಟೆಂಬರ್ 11: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡುವೆ ಟ್ವಿಟರ್ ವಾರ್ ನಡೆಯುತ್ತಿದ್ದು, ಇಬ್ಬರು ನಾಯಕರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿಕೊಂಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದರು ಒಂದು ಟ್ವೀಟ್ ಮಾಡ ಸಂಸದ ನಳಿನ್ ಮಾಜಿ ಸಿಎಂ ವಿರುದ್ದ ಸರಣಿ ಟ್ವೀಟ್ ನಲ್ಲಿ ನಿರತರಾಗಿದ್ದಾರೆ.


ಬಿಜೆಪಿ ವಿರೋಧ ಪಕ್ಷಗಳ ನಾಯಕರ ಚಾರಿತ್ರ್ಯ ಹರಣ ಮಾಡುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಟ್ವೀಟ್‌ಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್‌ ಪ್ರತ್ಯುತ್ತರ ನೀಡಿದ್ದಾರೆ. ಟಿಪ್ಪು ಜಯಂತಿಗೆ ಅನೇಕ ರಾಜಕಾರಣಿಗಳು, ವಿದ್ವಾಂಸರು, ಸಾಹಿತಿಗಳು ಮಾತ್ರವಲ್ಲದೆ ಕೋಟ್ಯಾಂತರ ಜನರು ವಿರೋಧ ವ್ಯಕ್ತಪಡಿಸಿದ್ದರು. ತನ್ನ ಮತಬ್ಯಾಂಕ್ ಭದ್ರಪಡಿಸಲು ಲಿಂಗಾಯತ ವೀರಶೈವ ಪ್ರತ್ಯೇಕ ಧರ್ಮ ಎಂದು ಹಿಂದೂ ಧರ್ಮವನ್ನು ಒಡೆಯಲು ಯತ್ನಿಸಿದ್ದೇ ಸಿದ್ದರಾಮಯ್ಯ ಅವರ ಅವಧಿಯ ಸಾಧನೆಯಾಗಿದೆ.


ಇಂತಹ ನೀಚ ಕೃತ್ಯಕ್ಕೆ ಕೈ ಹಾಕಿದ್ದರಿಂದಲೇ ಸ್ವಕ್ಷೇತ್ರದಲ್ಲೇ ಹೀನಾಯವಾಗಿ ಸೋತು ಇಂದು ಕಾಂಗ್ರೆಸ್ ಪಕ್ಷದಲ್ಲೇ ಮೂಲೆಗುಂಪಾಗಿದ್ದಾರೆ. ಸಿದ್ಧರಾಮಯ್ಯ ಅವರೇ, ನಿಮ್ಮ ಅಧಿಕಾರದ ಅವಧಿಯಲ್ಲಿ ಒಂದು ವರ್ಗವನ್ನು ಓಲೈಸಿಕೊಳ್ಳಲು ಹಿಂದೂ ಸಂಘಟನೆಯ ಕಾರ್ಯಕರ್ತರ ರಕ್ತವನ್ನೇ ಹರಿಸಿದ್ದು ನಮಗಿನ್ನೂ ನೆನಪಿದೆ.  ಹತ್ತಾರು ಕಾರ್ಯಕರ್ತರ ಹೆಣಗಳ ಮೇಲೆ ರಾಜಕಾರಣ ಮಾಡಿದ ನಿಮ್ಮ ಅಧಿಕಾರದ ಮೋಹ, ಪಕ್ಷದ ದುರಾಡಳಿತ ಇಂದು ನಿಮ್ಮನ್ನು ಪರಿತಪಿಸುವಂತೆ ಮಾಡಿದೆ. ನಿಮ್ಮ ಕರ್ಮವನ್ನು ಮತ್ತೆ ನೆನಪಿಸಿ. ಐಎಎಸ್ ಅಧಿಕಾರಿ ಡಿಕೆ ರವಿ, ಡಿವೈಎಸ್ ಪಿ ಗಣಪತಿ, ಎಸ್ ಐ ಮಲ್ಲಿಕಾರ್ಜುನ ಬಂಡೆಯಂತಹ ಅತಿದೊಡ್ಡ ಸರ್ಕಾರಿ ಅಧಿಕಾರಿಗಳ ಸಾವುಗಳಿಗೆ ಅಂದಿನ ಸಿದ್ದರಾಮಯ್ಯ ಸರ್ಕಾರ ಕಾರಣವಾಗಿದ್ದು ಮಾತ್ರವಲ್ಲದೆ ಆ ಅಮೂಲ್ಯ ಜೀವಗಳಿಗೆ ಬೆಲೆ ಇಲ್ಲದಂತಾಗಿತ್ತು.


ತಮ್ಮ ಪಕ್ಷದ ಪ್ರಭಾವಿ ನಾಯಕರೇ ಈ ಕೃತ್ಯಗಳಲ್ಲಿ ತೊಡಗಿದ್ದರೂ ಯಾವುದೇ ಕ್ರಮ ಕೈಗೊಳ್ಳದ ವ್ಯಕ್ತಿ ಯಾವ ಸೀಮೆಯ ನಾಯಕ? ಸಿದ್ದರಾಮಯ್ಯನವರು ತನ್ನ ಅಧಿಕಾರದಲ್ಲಿ ಮತಾಂಧ ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆಗಳ ಗೂಂಡಾಗಳನ್ನು ಜೈಲಿಂದ ಬಿಡುಗಡೆಗೊಳಿಸಿದ ನಂತರ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆದಿದ್ದು ಕಣ್ಣೆದುರೇ ಇದೆ.
ಇಂತಹ ಪ್ರಕರಣಗಳ ನಂತರವೂ ಅವರನ್ನು ಬೆಂಬಲಿಸಿದ ಪರಿಣಾಮ ಹತ್ತಾರು ಜೀವಗಳು ಬಲಿಯಾಗಿದೆ. ಹೆಣಗಳ‌ ಮೇಲೆ ರಾಜಕಾರಣ ಮಾಡಿದ ಬುದ್ಧಿ ಇನ್ಯಾರಿಗೆ ಇರುತ್ತೆ? ಸಿದ್ದರಾಮಯ್ಯ ಅವರಿಗೆ ಕಟೀಲ್ ತಿರುಗೇಟು ನೀಡಿದ್ದಾರೆ.


ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಲವು ಪ್ರದೇಶಗಳು ಜಲಾವೃತವಾಗಿವೆ. ಹವಮಾನ ಇಲಾಖೆ ಇನ್ನೂ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಮತ್ತೆ ಮಳೆಯ ಅಬ್ಬರ ಜಾಸ್ತಿಯಾಗುವ ಸಾಧ್ಯತೆ ಇದೆ. ಆದರೆ ಜನಪ್ರತಿನಿಧಿಗಳು ಮಾತ್ರ ಟ್ವೀಟರ್ ನಲ್ಲಿ ಆರೋಪ ಪ್ರತ್ಯಾರೋಪದಲ್ಲಿ ತೊಡಗಿರುವುದಕ್ಕೆ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *