Connect with us

    LATEST NEWS

    ಪುಟ್ಬಾಲ್ ಆಡುತ್ತಿದ್ದ ಮಕ್ಕಳ ಮೇಲೆ ಹಿಜ್ಬುಲ್ಲಾ ರಾಕೆಟ್ ದಾಳಿ – 12 ಮಕ್ಕಳ ಸಾವು

    ಇಸ್ರೇಲ್ ಜುಲೈ 28 : ಇಸ್ರೇಲ್ ಆಕ್ರಮಿತ ಮಜ್ದಾಲ್ ಶಾಮ್ಸ್ ಪ್ರದೇಶದಲ್ಲಿ ಪುಟ್ಬಾಲ್ ಆಡುತ್ತಿದ್ದ ಮಕ್ಕಳ ಮೇಲೆ ಇರಾನ್ ಬೆಂಬಲಿತ ಭಯೋತ್ಪಾದಕ ಸಂಘಟನೆ ಹಿಜ್ಬುಲ್ಲಾ ನಡೆಸಿದ ರಾಕೆಟ್ ದಾಳಿಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ ಎಂದು ಜೆರುಸಲೇಂ ಪೋಸ್ಟ್ ವರದಿ ಮಾಡಿದೆ.


    ಶನಿವಾರ ಸಂಜೆ ರಾಕೆಟ್ ನಗರದ ಫುಟ್ಬಾಲ್ ಮೈದಾನದ ಬಳಿ ಅಪ್ಪಳಿಸಿದ ಪರಿಣಾಮ ಮಕ್ಕಳು ಮತ್ತು 10ರಿಂದ 20 ವರ್ಷದವರೆಗಿನ ಹದಿಹರೆಯದವರು ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ.
    19 ಮಂದಿ ಗಾಯಗೊಂಡಿದ್ದು, 6 ಮಂದಿ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಮೇಘನ್ ಡೇವಿಡ್ ಅಡೋಮ್(ಎಂಡಿಎ) ತಂಡವು ಆಸ್ಪತ್ರೆ ದಾಖಲಿಸಿದೆ ಎಂದು ಪ್ರಕಟಣೆ ತಿಳಿಸಿದೆ.


    ಹಿಜ್ಬುಲ್ಲಾ ನೆಲೆಯಿಂದಲೇ ರಾಕೆಟ್ ಲಾಂಚ್ ಆಗಿದೆ ಎಂದು ಪ್ರಾಥಮಿಕ ತನಿಖೆ ಬಳಿಕ ಎಂಡಿಎ ಹೇಳಿದೆ. ದಕ್ಷಿಣ ಲೆಬನಾನ್‌ನ ಚೆಬಾದ ಹಳ್ಳಿಯೊಂದರಿಂದ ರಾಕೆಟ್ ಉಡಾಯಿಸಲಾಗಿದೆ ಎಂದು ಅದು ತಿಳಿಸಿದೆ.
    ಪಾಲೆಸ್ಟೀನ್‌ನ ಹಮಾಸ್ ಬಂಡುಕೋರರ ದಾಳಿ ಬಳಿಕ ಇಸ್ರೇಲ್ ತಿರುಗಿಬಿದ್ದಿದ್ದು,ಪ್ರತೀಕಾರ ದಾಳಿ ನಡೆಸುತ್ತಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಬೆಂಬಲಿತ ಉಗ್ರಗಾಮಿ ಸಂಘಟನೆಗಳು ಇಸ್ರೇಲ್ ವಿರುದ್ಧ ದಾಳಿ ನಡೆಸುತ್ತಿವೆ.

    Share Information
    Advertisement
    Click to comment

    You must be logged in to post a comment Login

    Leave a Reply