Connect with us

    LATEST NEWS

    ತಿರವು ಪಡೆದ ಮಂಗಳೂರು ವಿಮಾನ ನಿಲ್ದಾಣ ಸಿಬ್ಬಂದಿಯ ಲೈಂಗಿಕ ಕಿರುಕುಳ ಪ್ರಕರಣ

    ತಿರವು ಪಡೆದ ಮಂಗಳೂರು ವಿಮಾನ ನಿಲ್ದಾಣ ಸಿಬ್ಬಂದಿಯ ಲೈಂಗಿಕ ಕಿರುಕುಳ ಪ್ರಕರಣ

    ಮಂಗಳೂರು ಫೆಬ್ರವರಿ 10: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪರಸ್ಪರ ವಿರುದ್ದ ದೂರುಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

    ಲೈಂಗಿಕ ಕಿರುಕುಳ ಆರೋಪ ಮಾಡಿದ ಯುವತಿ ಹಾಗೂ ಆಕೆಯ ಜೊತೆಯಲ್ಲಿದ್ದ ಯುವಕ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ರಕಿತ್ ಎಂಬುವರು ದೂರು ದಾಖಲಿಸಿದ್ದಾರೆ.

    ತಿರುವು ಪಡೆದ ಪ್ರಕರಣ

    ವಿಮಾನ‌ ನಿಲ್ದಾಣದ ಮಹಿಳಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಯುವತಿ ನಿನ್ನೆ ತನ್ನ ಹುಟ್ಟು ಹಬ್ಬದ ಪಾರ್ಟಿ ಮುಗಿಸಿ ತೆರಳುವಾಗ ತಡವಾಗಿದೆ. ಈ ಹಿನ್ನೆಲೆಯಲ್ಲಿ ತನ್ನ ಸಹೋದ್ಯೋಗಿಯೊಂದಿಗೆ ಕಾರಿನಲ್ಲಿ‌ ಮನೆಯತ್ತ ತೆರಳಿದ್ದಾರೆ. ಕಾರಿನಲ್ಲಿಬ್ಬರು ತೆರಳಿರುವುದನ್ನು ಗಮನಿಸಿದ ಯುವಕರ ತಂಡ ಒಂದು ಹಿಂಬಾಲಿಸಿ ಕೊಂಡು ಹೋಗಿದೆ ಎಂದು ಹೇಳಲಾಗಿದೆ. ಆದ್ಯಪಾಡಿ ಬಳಿ ಕಾರು ಅಡ್ಡಗಟ್ಟಿ ಯುವಕರ ತಂಡ ಹಿಂದೂ ಸಂಘಟನೆಯ ಹೆಸರು ಹೇಳಿಕೊಂಡು ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದೆ ಎಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಯುವತಿ ಪ್ರಕರಣ ದಾಖಲಿಸಿದ್ದಾಳೆ. ಯುವಕರ ತಂಡ ತನಗೆ ಲೈಂಗಿಕ ಕಿರುಕುಳವನ್ನೂ ನೀಡಿದೆ ಎಂದು ಯುವತಿ ದೂರಿದ್ದಾಳೆ.

    ಅಲ್ಲದೇ ಅನ್ಯಧರ್ಮೀಯನ ಜತೆ ಇರುವ ಶಂಕೆಯಿಂದ ಕಾರು ಅಡ್ಡಗಟ್ಟಿದ್ದ ಶೇಕರ್ ,ಅಬಿಷೇಕ್ ,ನಿಖಿಲ್ ಹಾಗು ರಕ್ಷಿತ್ ತಮ್ಮ ಮೇಲೆ ಹಲ್ಲೆ ನಡೆಸಿ ತನ್ನಲ್ಲಿದ್ದ ಚಿನ್ನದ ಸರ, ಎಟಿಎಮ್ ಕಾರ್ಡ್ ಕಿತ್ತು ಕಾರಿಗೆ ಕಲ್ಲು ತೂರಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಯುವತಿ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ.

    ಆದರೆ ಈ ನಡುವೆ ಈ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದೂ ಯುವತಿ ಹಾಗು ಕಾರಿನಲ್ಲಿದ್ದ ಯುವಕನ ವಿರುದ್ಧ ರಕ್ಷೀತ್ ಎಂಬವರು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಾರಿನಲ್ಲಿದ್ದ ಯುವಕ ಹಾಗು ಆತನ ಸ್ನೇಹಿತರು ತಮ್ಮ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಪ್ರಕರಣ ದಾಖಲಿಸಿದ್ದಾರೆ.

    ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರು

    ಆದರೆ ಯುವಕರು ಹೇಳುವ ಪ್ರಕಾರ , ತಮ್ಮ ಕೆಲಸ ಮುಗಿಸಿ ತಡರಾತ್ರಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭದ ಅದ್ಯಪಾಡಿ ನಿರ್ಜನ ಪ್ರದೆಶದಲ್ಲಿ ಕಾರು ನಿಲ್ಲಿಸಲಾಗಿತ್ತು. ತಾವು ತೆರಳುತ್ತಿದ್ದಾಗ ಏಕಾಏಕಿ ಅತಿ ವೇಗ ದಿಂದ ಬಂದ ಕಾರು ಬೈಕ್ ಒಂದಕ್ಕೆ ಡಿಕ್ಕಿ ಹೊಡೆದು ಮುಂದೆ ಸಾಗಿದೆ.

    ಈ ಪರಿಣಾಮ ಕಾರನ್ನು ಹಿಂಬಾಲಿಸಿ ಅಡ್ಡ ಗಟ್ಟಿ ಗುದ್ದಿ ಓಡಿದ ಬಗ್ಗೆ ಕಾರಿನಲ್ಲಿದ್ದವರನ್ನು ವಿಚಾರಿಸಿದ್ದೇವೆ . ಬೈಕ್ ಡ್ಯಾಮೇಜ್ ಮಾಡಿದ್ದಕ್ಕೆ ದುರಸ್ಥಿಗೆ ಹಣ ಕೇಳಿದ್ದೇವೆ ಎಂದು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಾರಿ ನಲ್ಲಿದ್ದ ಯುವತಿ ತನ್ನಲ್ಲಿದ್ದ ಎಟಿಎಂ ಕಾರ್ಡ್ ನೀಡಿ 1500 ರೂಪಾಯಿ ತೆಗೆದು ಕೊಳ್ಳುವಂತೆ ತಿಳಿಸಿದ್ದಾಳೆ. ಅದರಂತೆ ಎಟಿಎಂ ಗೆ ತೆರಳಿ ಹಣ ಡ್ರಾ ಮಾಡಿ ಬರುವಾಗ ಕಾರಿನಲ್ಲಿದ್ದ ಯುವಕನ ಸ್ನೇಹಿತರು ಬಂದು ತಮ್ಮ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಈ ಹಿನ್ನೆಲೆಯಲ್ಲಿ ಎರಡು ಕಡೆಯಿಂದ ಪ್ರಕರಣ ದಾಖಲಿಸಿ ಕೊಂಡಿರುವ ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಯುವಕರು ಗಾಯ ಗೊಂಡಿದ್ದು ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ತನಿಖೆಯ ಬಳಿಕವೇ ಈ ಎರಡು ಪ್ರಕರಣದ ಸತ್ಯಾ ಸತ್ಯತೆ ಬೆಳಕಿಗೆ ಬರಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply