Connect with us

LATEST NEWS

ನೈತಿಕ ಪೊಲೀಸ್ ಗಿರಿ ಸಮರ್ಥಿಸಿದ ಸಿಎಂ ವಿರುದ್ದ #BommaiStopMoralPolicing ಅಭಿಯಾನ

ಬೆಂಗಳೂರು ಅಕ್ಟೋಬರ್ 14: ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಟ್ವಿಟರ್‌ನಲ್ಲಿ #BommaiStopMoralPolicing ಎಂಬ ಶೀರ್ಷಿಕೆಯಡಿ ದೊಡ್ಡ ಅಭಿಯಾನವೇ ಆರಂಭವಾಗಿದೆ.


ನಿನ್ನೆ ಉಡುಪಿಗೆ ಆಗಮಿಸಿದ ಸಂದರ್ಭ ಮಾತನಾಡಿದ ಅವರು ಸಮಾಜದಲ್ಲಿ ಜನರ ಭಾವನೆಗಳಿಗೆ ಧಕ್ಕೆ ಬರದಂತೆ ನಡೆದುಕೊಳ್ಳಬೇಕಾಗುತ್ತದೆ. ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿ ಕ್ರಿಯೆ-ಪ್ರತಿಕ್ರಿಯೆಗಳು ಇದ್ದೇ ಇರುತ್ತವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು, ಈ ಮೂಲಕ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿದ್ದರು.


ಮತೀಯ ಗೂಂಡಾಗಿರಿ ನಡೆಸುತ್ತಿರುವ ಜನರನ್ನು ಬೆಂಬಲಿಸಿ ಮುಖ್ಯಮಂತ್ರಿಯವರೇ ಹೇಳಿಕೆ ನೀಡಿದ್ದಾರೆ. ಇದು ಅಪಾಯಕಾರಿ ಬೆಳವಣಿಗೆ. ಮುಖ್ಯಮಂತ್ರಿಯವರ ಬೆಂಬಲವಿದೆ ಎಂದು ಇನ್ನೂ ದೊಡ್ಡ ಸಂಖ್ಯೆಯಲ್ಲಿ ಅಂತಹ ಕೃತ್ಯಗಳು ನಡೆಯುವ ಅಪಾಯವಿದೆ’ ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ವಕ್ತಾರೆ ಲಾವಣ್ಯಾ ಬಲ್ಲಾಳ್‌, ‘ರಾಜ್ಯದ ಮುಖ್ಯಮಂತ್ರಿಯೇ ಮತೀಯ ಗೂಂಡಾಗಿರಿಯನ್ನು ಬೆಂಬಲಿಸಿದ್ದಾರೆ. ಉಳಿದವರಿಂದ ಇನ್ನು ಏನನ್ನು ನಿರೀಕ್ಷಿಸಬಹುದು? ರಾಜ್ಯದ ಜನರೇ ದಯವಿಟ್ಟು ಸುರಕ್ಷಿತವಾಗಿರಿ. ಸರ್ಕಾರ ನಿಮ್ಮನ್ನು ರಕ್ಷಿಸುತ್ತದೆ ಎಂದು ಬಯಸಬೇಡಿ’ ಎಂದು ಹೇಳಿದ್ದಾರೆ.


‘ಸಂವಿಧಾನದ ಹೆಸರಿನಲ್ಲಿ ಪ್ರಮಾಣ ಮಾಡಿದ ಮುಖ್ಯಮಂತ್ರಿ ಈ ರೀತಿ ಹೇಳಿಕೆ ನೀಡಿರುವುದು ನಾಚಿಕೆಗೇಡಿನ ಕೆಲಸ. ಈ ಮಾತಿನಿಂದ ಮತೀಯವಾದಿಗಳು ಪ್ರಚೋದಿತರಾಗಿ ಬೀದಿಗಿಳಿಯವುದು ಖಚಿತ. ಈ ಮಾತಿಗಾಗಿ ಬೊಮ್ಮಾಯಿ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು’ ಎಂದು ಡಿವೈಎಫ್‌ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್‌ ಕಾಟಿಪಳ್ಳ ಆಗ್ರಹಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *