ಮಲ್ಪೆ ಫೆಬ್ರವರಿ 03: ಮಲ್ಪೆ ಬೀಚ್ನಲ್ಲಿ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಕಳ್ಳಿಯರನ್ನು ಪೊಲೀಸರು ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ,

ಬಂಧಿತರನ್ನು ಆಶಾ ಯಾನೆ ಸುಮಿತ್ರ ಕೃಷ್ಣ, ಮತ್ತು ರೇಖಾ ದಾನಪ್ಪ ಎಂದು ಗುರುತಿಸಲಾಗಿದೆ. ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಸುರೇಶ್ ಕುಮಾರ್, ವಿಶ್ವನಾಥ ಮತ್ತು ಸಿಂಚನ ಅವರು ಶಿವಮೊಗ್ಗ ಜಿಲ್ಲೆಯ ಭದ್ರವತಿಯ ಹೊಸ ಮನೆ ಎಂಬಲ್ಲಿ ಈ ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಸಿಜೆಎಂ ನ್ಯಾಯಧೀಶರ ಮುಂದೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಸ್ತುತ ಅವರನ್ನು ಮಂಗಳೂರು ಕಾರಾಗೃಹಕ್ಕೆ ಹಾಜರುಪಡಿಸಲಾಗಿದೆ.