LATEST NEWS
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಇಬ್ಬರು ಅರೆಸ್ಟ್…!!

ಉಡುಪಿ ಜೂನ್ 1: ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬಳ್ಳಾರಿ ಮೂಲದ ಶಿವಶಂಕರ್ (58) ಮತ್ತು ಸಚಿನ್ (28) ಎಂದು ಗುರುತಿಸಲಾಗಿದೆ.
ಆರೋಪಿಗಳು ಪರ್ಕಳದಲ್ಲಿ 14ರ ಹರೆಯದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಶಿವಶಂಕರ್ ಫುಡ್ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಸಚಿನ್ ಮಣಿಪಾಲದಲ್ಲಿರುವ ಕ್ಯಾಂಟೀನ್ ನಲ್ಲಿ ದುಡಿಯುತ್ತಿದ್ದ ಎಂದು ತಿಳಿದುಬಂದಿದೆ.
ಈ ಕುರಿತು ಜಿಲ್ಲಾ ಮಕ್ಕಳ ಸಹಾಯವಾಣಿಗೆ ದೂರು ಬಂದಿದ್ದು ತತ್‌ಕ್ಷಣ ನೊಂದ ಬಾಲಕಿಗೆ ರಕ್ಷಣೆ ಮತ್ತು ಪುನರ್ವಸತಿ ನೀಡುವ ಮೂಲಕ ಆರೋಪಿಗಳನ್ನು ಬಂಧಿಸಲಾಗಿದೆ.
