ಪುತ್ತೂರು ವಿದ್ಯಾರ್ಥಿನಿಗೆ ಡ್ರಗ್ಸ್‌ ನೀಡಿ ಸಾಮೂಹಿಕ ಅತ್ಯಾಚಾರ ಬಂಧನಕ್ಕೆ ನಾಲ್ಕು ತಂಡ ರಚನೆ

ಮಂಗಳೂರು ಜುಲೈ 3: ಮಾದಕ ವಸ್ತು ನೀಡಿ ಕಾಲೇಜು ವಿಧ್ಯಾರ್ಥಿನಿಯೊಬ್ಬಳನ್ನು ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ವಿಧ್ಯಾರ್ಥಿನಿಯ ಸಹಪಾಠಿಗಳ ಬಂಧನಕ್ಕೆ ನಾಲ್ಕು ತಂಡ ರಚಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಬಿ.ಎಂ ಲಕ್ಮೀಪ್ರಸಾದ್ ತಿಳಿಸಿದ್ದಾರೆ.

ಪುತ್ತೂರಿನ ಖಾಸಗಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳಿಗೆ ಅವಳ ಸಹಪಾಠಿ ನಾಲ್ಕು ವಿಧ್ಯಾರ್ಥಿಗಳು ಡ್ರಗ್ಸ್ ನೀಡಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ವಿಧ್ಯಾರ್ಥಿನಿ ಅರೆ ಪ್ರಜ್ಞಾವಸ್ಥೆ ತಲುಪಿದ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಅಲ್ಲದೆ ಕೀಚಕರು ಅತ್ಯಾಚಾರದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು.

ಅತ್ಯಾಚಾರದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ದಕ್ಷಿಣಕನ್ನಡ ಪೊಲೀಸ್ ಇಲಾಖೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ.

ಘಟನೆ ನಡೆದ ಸ್ಥಳಕ್ಕೆ ಹಿರಿಯ ಅಧಿಕಾರಿಗಳೊಂದಿಗೆ ಎಸ್ಪಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈ ಮಧ್ಯೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮಿ ಪ್ರಸಾದ್ ಸಾರ್ವಜನಿಕರಿಗೆ ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡದಂತೆ ಹಾಗೂ ಕಂಪ್ಯೂಟರ್ , ಮೊಬೈಲ್ ಪೋನ್ ಗಳಲ್ಲಿ ಸ್ಟೋರ್ ಮಾಡದಂತೆ ಎಚ್ಚರಿಕೆ ನೀಡಿದ್ದು, ಶೇರ್ ಹಾಗೂ ಸ್ಟೋರ್ ಮಾಡಿದವರ ವಿರುದ್ದ ಸ್ವಯಂ ಪ್ರೇರಿತ ದೂರು ದಾಖಲು ಮಾಡಿ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

Facebook Comments

comments