Connect with us

    LATEST NEWS

    ಕಾಸರಗೋಡು ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್..!!

    ಕಾಸರಗೋಡು: ಕಾಸರಗೋಡಿನಲ್ಲಿ ಕಾರಿನಲ್ಲಿ ಗಾಮಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಕಿಲೋ ಗಾಂಜಾ ವಶಕ್ಕೆ ಪಡೆದಿದ್ದಾರೆ.

    ಸೀತಾಂಗೋಳಿಯ ಹನೀಫ್ ಬಿ . (40) ಮತ್ತು ಫೈಝಲ್ (38) ಬಂಧಿತ ಆರೋಪಿಗಳಾಗಿದ್ದಾರೆ.

    ಅಬಕಾರಿ ದಳದ ಸಿಬಂದಿಗಳಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾಸರಗೋಡು ಅಬಕಾರಿ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಗಾಂಜಾ ಸಾಗಾಟ ಪತ್ತೆ ಮಾಡಿದ್ದಾರೆ.

    ಫೈಝಲ್  ಮಾದಕ ವಸ್ತು ಸಾಗಾಟ ಸೇರಿದಂತೆ ಎಂಟಕ್ಕೂ ಅಧಿಕ ಪ್ರಕರಣ ಗಳ ಆರೋಪಿಯಾಗಿದ್ದಾನೆ. ಹನೀಫ್ ವಿರುದ್ಧವೂ ಗಾಂಜಾ ಸಾಗಾಟ ಪ್ರಕರಣ ಗಳಿರುವುದಾಗಿ ಅಬಕಾರಿ ದಳದ ಸಿಬ್ಬಂದಿಗಳು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply