LATEST NEWS
ಹೈಟೆಕ್ ವೆಶ್ಯಾವಾಚಿಕೆ ಅಡ್ಡೆ ಮೇಲೆ ದಾಳಿ ಇಬ್ಬರ ಬಂಧನ

ಹೈಟೆಕ್ ವೆಶ್ಯಾವಾಚಿಕೆ ಅಡ್ಡೆ ಮೇಲೆ ದಾಳಿ ಇಬ್ಬರ ಬಂಧನ
ಮಂಗಳೂರು ಜುಲೈ 12: ಮಂಗಳೂರಿನ ಕೊಟ್ಟಾರ ಚೌಕಿ ಬಳಿಯ ಮನೆಯೊಂದರಲ್ಲಿ ನೆಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಮೇಲೆ ದಾಳಿ ನಡೆಸಿದ ಪೊಲೀಸರು ಓರ್ವ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಬಳಿಯ ಮನೆಯೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಮಂಗಳೂರು ಹೊರವಲಯದ ಕೊಟ್ಟಾರ ಚೌಕಿ ಪಂಪ್ ಹೌಸ್ ಬಳಿಯಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಒರ್ವ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಇಬ್ಬರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಬಂಧಿತ ಆರೋಪಿಯನ್ನು ಪಡುಬಿದ್ರೆಯ ಸಜಿತ್ ಶೇಖರ್ (30) ಎಂದು ಗುರುತಿಸಲಾಗಿದೆ.
ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರು 5 ಮೊಬೈಲ್ ಫೋನ್ ಗಳನ್ನು ಹಾಗೂ 15,240 ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಸಜಿತ್ ಶೇಖರ್ ಈ ಮನೆಯನ್ನು ಬಾಡಿಗೆ ಮನೆ ಪಡೆದು ಬಂಧಿತ ಮಹಿಳೆಯ ಸಹಾಯದಿಂದ ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂದು ಹೇಳಲಾಗಿದೆ .