BELTHANGADI
ಬೆಳ್ತಂಗಡಿ – ತಾವೆ ಸಾಕಿದ ದನವನ್ನು ಕಡಿದು ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟ ಸಹೋದರರು

ಬೆಳ್ತಂಗಡಿ ಜುಲೈ 05: ಮನೆಯಲ್ಲಿ ತಾವೇ ಸಾಕಿದ ದನವನ್ನು ಕಡಿದು ಅದನ್ನು ಮಾಂಸ ಮಾಡಿ ಅಂಗಡಿಯಲ್ಲಿ ಅಕ್ರಮವಾಗಿ ಮಾರಾಟಕ್ಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರರನ್ನು ಬೆಳ್ತಂಗಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಅಬ್ದುಲ್ ರಜಾಕ್ (28), ಮತ್ತು ಅಬ್ದುಲ್ ರವೂಪ್ (20) ಎಂದು ಗುರುತಿಸಲಾಗಿದೆ. ಆರೋಪಿಗಳು ತಮ್ಮ ಅಂಗಡಿಯಲ್ಲಿ, ಯಾವುದೇ ಪರವಾನಿಗೆ ಹೊಂದದೇ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಮಾಹಿತಿ ದೊರೆತ ಮೇರೆಗೆ, ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ., ಈ ವೇಳೆ 47 ಕೆಜಿ ದನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಪ್ರಿಡ್ಜ್ ನೊಳಗೆ ಇರಿಸಿರುವುದು ಕಂಡುಬಂದಿರುತ್ತದೆ.

ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 51/2025, ಕಲಂ: 4, 12 ಕರ್ನಾಟಕ ಗೋವದೆ ಪ್ರತಿಬಂದಕ ಮತ್ತು ಜಾನುವಾರು ಸಂರಕ್ಷಣಾ ಅದಿನಿಯಮ 2020 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.ವಧೆ ಮಾಡಲಾದ ಜಾನುವಾರಿನ ಬಗ್ಗೆ ವಿಚಾರಿಸಲಾಗಿ, ಸಹೋದರರಾದ ಆರೋಪಿಗಳು ಅವರ ಮನೆಯಲ್ಲಿ ಸಾಕಿದ್ದ ಜಾನುವಾರನ್ನು ವಧೆ ಮಾಡಿ, ಮಾಂಸ ಮಾರಾಟಕ್ಕೆ ಯತ್ನಿಸಿರುವುದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.
1 Comment