DAKSHINA KANNADA
ಕಡಬ – ಮಾರುತಿ ಓಮ್ನಿ ಮತ್ತು ಕ್ರೇಟಾ ನಡುವೆ ಡಿಕ್ಕಿ- ಓರ್ವ ಸಾವು

ಕಡಬ ಡಿಸೆಂಬರ್ 23: ಕ್ರೆಟಾ ಕಾರು ಹಾಗೂ ಮಾರುತಿ ಓಮ್ನಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ.
ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಮೃತರನ್ನು ಓಮ್ನಿ ಚಲಾಯಿಸುತ್ತಿದ್ದ ಸೋಮವಾರ ಪೇಟೆಯ ಚೌಡ್ಲು ಗ್ರಾಮದ ಕೆಂಚುಮನೆ ನಿವಾಸಿ ರವಿ (53) ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ರವಿ ಅವರ ತಾಯಿ ಮಣಿಯಮ್ಮ(75), ಪತ್ನಿ ವಾಣಿ (47), ಪುತ್ರಿ ರಿಷಾ (19), ಪುತ್ರ ಶರಣ್ (10), ಸಹೋದರ ಯೋಗೇಶ್ (55), ಅವರ ಪತ್ನಿ ನೀತು (45), ಪುತ್ರಿ ನೇಹಾ (24), ಪುತ್ರ ಅಂಜನ್ (14) ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
