LATEST NEWS
ಕರ್ನಾಟಕದ ಇಬ್ಬರಲ್ಲಿ ಓಮೈಕ್ರಾನ್ ವೈರಸ್ ಪತ್ತೆ…!!

ನವದೆಹಲಿ ಡಿಸೆಂಬರ್ 2: ವಿದೇಶಗಳಲ್ಲಿ ಆತಂಕ ಸೃಷ್ಠಿಸಿರುವ ಕೊರೊನಾದ ರೂಪಾಂತರಿ ತಳಿ ಓಮೈಕ್ರಾನ್ ಭಾರತದಲ್ಲಿ ಪತ್ತೆಯಾಗಿದ್ದು, ಕರ್ನಾಟಕಕ್ಕೆ ಆಗಮಿಸಿರುವ ಇಬ್ಬರಲ್ಲಿ ಈ ವೈರಲ್ ಪತ್ತೆಯಾಗಿದೆ. ಕೊರೊನಾವೈರಸ್‌ನ ರೂಪಾಂತರಿ ತಳಿಯಾದ ಓಮೈಕ್ರಾನ್ ಭಾರತದಲ್ಲೂ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
66 ವರ್ಷದ ಒಬ್ಬ ವೃದ್ದನಲ್ಲಿ ಹಾಗೂ 44 ವರ್ಷದ ವ್ಯಕ್ತಿಯಲ್ಲಿ ಓಮೈಕ್ರಾನ್ ಇರುವುದು ಪತ್ತೆಯಾಗಿದೆ. ಈ ಇಬ್ಬರೂ ಕರ್ನಾಟಕದವರು ಎಂಬುದು ತಿಳಿದು ಬಂದಿದೆ. ಇದರಲ್ಲಿ ಒಬ್ಬರು ಬೆಂಗಳೂರಿನವರು ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಲವ ಅಗರವಾಲ್ ತಿಳಿಸಿದ್ದಾರೆ. ಅಲ್ಲದೇ ಈ ಬಗ್ಗೆ ಯಾರೂ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ. ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಇಬ್ಬರಲ್ಲಿ ಕೋವಿಡ್ ತಪಾಸಣೆ ಮಾಡಿದಾಗ ಕೋವಿಡ್ ದೃಢಪಟ್ಟಿತು. ಆದರೆ, ವೈರಸ್ ಬಗ್ಗೆ ಗೊಂದಲ ಇತ್ತು. ಐಸಿಎಂಆರ್‌ನಲ್ಲಿ ತಪಾಸಣೆ ಮಾಡಿದಾಗ ಅದು ಕೊರೊನಾವೈರಸ್‌ನ ಹೊಸ ರೂಪಾಂತರವಾದ ಓಮೈಕ್ರಾನ್ ಎಂಬುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.