ನೇತ್ರಾವತಿ ನದಿಗೆ ಸ್ನಾನಮಾಡಲು ಹೋದ ಇಬ್ಬರು ಮಕ್ಕಳು ನೀರು ಪಾಲು

ಬಂಟ್ವಾಳ ಮೇ 25 : ನೇತ್ರಾವತಿ ನದಿಗೆ ಸ್ನಾನ ಮಾಡಲು ಹೋಗಿ ಇಬ್ಬರು ಮಕ್ಕಳು ನೀರು ಪಾಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ಸಂಜೆ ಸಂಭವಿಸಿದೆ.

ಮೃತ ಮಕ್ಕಳನ್ನು 14 ವರ್ಷದ ಮನೀಶ್ ಮತ್ತು 13 ವರ್ಷದ ಅಜಿತ್ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ- ಮಾಣಿ ರಾಷ್ಟ್ರೀಯ ಹೆದ್ದಾರಿ ನಡುವಿನ ಸೂರಿಕುಮೇರು ಸಮೀಪದ ಬರಿಮಾರು ಎಂಬಲ್ಲಿ ಈ ದುರ್ಘಟನೆ ನಡೆದಿದ್ದು ಇನ್ನೊಂದು ಮಗುವಿನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳೀಯ ನಿವಾಸಿ ಸಂಜೀವ ಬೋವಿ ಎಂಬವರ ಮನೆಗೆ ಮದುವೆ ಕಾಯ೯ಕ್ರಮಕ್ಕೆ ಕುಂಬ್ಳೆಯಿಂದ ಬಂದಿದ್ದ ಸಂಬಂಧಿಕರಾದ ಏಳು ಮಂದಿ ಮಕ್ಕಳು ಇಲ್ಲಿನ ನೇತ್ರಾವತಿ ನದಿಗೆ ಸ್ನಾನಕ್ಕೆ ತೆರಳಿದ್ದ ವೇಳೆ ಈ ಪೈಕಿ ಇಬ್ಬರು ಮಕ್ಕಳು ನೀರಿನ ಗುಂಡಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Facebook Comments

comments