Connect with us

    LATEST NEWS

    ಕ್ಯಾಂಡಲ್ ಸಂತು ಕೊಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ಕ್ಯಾಂಡಲ್ ಸಂತು ಕೊಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ಮಂಗಳೂರು, ಜುಲೈ 20 : 2009 ರಲ್ಲಿ ನಡೆದ ಸಂತು ಅಲಿಯಾಸ್ ಸಂತೋಷ್ ಕೊಲೆ ಪ್ರಕರಣವನ್ನು ಸುದೀರ್ಘ ವಿಚಾರಣೆ ನಡೆಸಿದ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಆರೋಪಿಗಳಾದ ಇಕ್ಬಾಲ್ ಕಾವೂರು ಹಾಗೂ ಫಾರೂಕ್ ಕಾರ್ಕಳ ಇವರುಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ.


    ದಿನಾಂಕ 18 /2/ 2009 ರಂದು ಬೆಳಿಗ್ಗೆ 9.30 ಗಂಟೆಯ ಸಮಯದಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಹೋಗುತ್ತಿದ್ದ ಸಂತು ಅಲಿಯಾಸ್ ಸಂತೋಷ್ ಎಂಬುವವನಿಗೆ ನೀಲಿ ಬಣ್ಣದ ಕಾರಿನಲ್ಲಿ ಬಂದ ಅಪರಿಚಿತರ ಗುಂಪೊಂದು ಸಂತೋಷನ ತಲೆ ಹೊಟ್ಟೆ ಭಾಗಕ್ಕೆ ಕತ್ತಿಯಿಂದ ಕಡಿದು ತೀವ್ರವಾಗಿ ಗಾಯಗೊಳಿಸಿದ ಕಾರಣ ಮರಣ ಹೊಂದಿದ್ದನು.

    ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 19/09 ಕಲಂ 143,147,148 302 r/w 149 IPC ರಂತೆ ಪ್ರಕರಣವೂ ದಾಖಲಾಗಿದ್ದು ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು 22 ಜನ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.

    ಈ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿದ ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮಂಗಳೂರು ರವರು ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿ ನ್ಯಾಯಾಲಯ ಆದೇಶಿಸಿದೆ.

    ಪ್ರಕರಣದ ತನಿಖೆಯನ್ನು ನಡೆಸಿದ ಆಗಿನ ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ನಂಜುಂಡೇಗೌಡ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಮಾನ್ಯ ಪೊಲೀಸ್ ಅಧೀಕ್ಷಕರಾದ ಬಿ.ಆರ್. ರವಿಕಾಂತೇಗೌಡ ಐಪಿಎಸ್. ಇವರು ಪ್ರಶಂಶಿಸಿದ್ದು ಸೂಕ್ತ ಬಹುಮಾನವನ್ನು ಘೋಷಿಸಿರುತ್ತಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *