Connect with us

LATEST NEWS

ಮತ್ತೆ ಇಬ್ಬರನ್ನು ಬಲಿ ತೆಗೆದುಕೊಂಡ ಶಂಕಿತ ಡೆಂಗ್ಯೂ

ಮತ್ತೆ ಇಬ್ಬರನ್ನು ಬಲಿ ತೆಗೆದುಕೊಂಡ ಶಂಕಿತ ಡೆಂಗ್ಯೂ

ಮಂಗಳೂರು ಅಗಸ್ಟ್ 28: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿಯ ರುದ್ರನರ್ತನ ಮುಂದುವರೆದಿದೆ. ಈಗಾಗಲೇ 11 ಮಂದಿಯನ್ನು ಬಲಿ ತೆಗೆದುಕೊಂಡಿರುವ ಶಂಕಿತ ಡೆಂಗ್ಯೂಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ.

ಮೃತರನ್ನು ಸೋಮೇಶ್ವರದ ಉದಯಚಂದ್ರ ಎಂಬುವರ ಪತ್ನಿ ಸುಮತಿ ಹಾಗೂ ಉಳ್ಳಾಲ ಸಮೀಪದ ಚೆಂಬುಗುಡ್ಡೆ ನಿವಾಸಿ ಜಯಪ್ರಕಾಶ್ ಗಟ್ಟಿ ಎಂದು ಗುರುತಿಸಲಾಗಿದೆ.

ದೇರಳಕಟ್ಟೆ ಯೇನೆಪೋಯ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸುಮತಿ ತೀವ್ರ ಜ್ವರದಿಂದ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭ ಅವರಿಗೆ ಜಾಂಡಿಸ್ ಇರುವ ಬಗ್ಗೆ ತಿಳಿದು ಬಂದಿತ್ತು. ಬಳಿಕ ಆರೋಗ್ಯದಲ್ಲಿ ಏರುಪೇರಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಟೆಂಪೋ ಚಾಲಕರಾಗಿದ್ದ ಜಯಪ್ರಕಾಶ್ ಗಟ್ಟಿ ಜ್ವರದಿಂದ ಬಳಲುತ್ತಿದ್ದರು. ಅವರನ್ನು ನಗರದ ವಿವಿಧ ಮೂರು ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ನೀಡಿದರೂ ಅವರ ರಕ್ತದ ಪ್ಲೇಟ್‌ಲೆಟ್‌ನಲ್ಲಿ ವ್ಯತ್ಯಾಸವಾದ ಕಾರಣ ಮೃತಪಟ್ಟಿದ್ದಾರೆ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

Facebook Comments

comments