LATEST NEWS
ಕೋಟ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಯುವತಿ ಸಾವು
ಉಡುಪಿ : ಕೋಟ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಿನ್ನೆ ಸಂಭವಿಸಿದೆ. ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಇಬ್ಬರು ಯುವತಿಯರಲ್ಲಿ ಓರ್ವಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೋಟದ ರಾಷ್ಟ್ರೀಯ ಹೆದ್ದಾರಿ ಕೃಷ್ಣಭವನ ಹೋಟೆಲ್ ಎದುರುಗಡೆ ಶನಿವಾರ ದ್ವಿಚಕ್ರ ವಾಹನಕ್ಕೆ ಫಾರ್ಚುನರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (24) ಮೃತಪಟ್ಟಿದ್ದು, ಆಕೆಯ ಸ್ನೇಹಿತೆ ಉಜಿರೆ ಮೂಲದ ಕುಂದಾಪುರ ಕೋಡಿಯ ಪ್ರಜ್ಞಾ (25)ಸ್ಥಿತಿ ಚಿಂತಾಜನಕವಾಗಿದೆ.
ಕುಂದಾಪುರದಿಂದ ಉಡುಪಿ ಕಡೆ ಸ್ಕೂಟಿಯಲ್ಲಿ ಇಬ್ಬರು ಯುವತಿಯರು ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟಿಯಲ್ಲಿದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದು, ಶ್ರೇಯಾ ಉಡುಪಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರೆ, ಪ್ರಜ್ಞಾ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದಾಗ ಸ್ಥಳೀಯರು, ಸಾಸ್ತಾನ ಟೋಲ್ ಬಳಿ ವಾಹನ ತಡೆದು ಕೋಟ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Facebook Comments
You may like
-
ಜೆರಾಕ್ಸ್ ಡಿಎಲ್ ನೀಡಿದ್ದಕ್ಕೆ ಯುವಕನ ಮೇಲೆ ಕೋಟ ಪೊಲೀಸರ ದರ್ಪ..ಯುವಕನ ತಾಯಿಯ ಮೇಲೂ ಕೈ ಮಾಡಿದ ಆರೋಪ….!!
-
ಡಿವೈಡರ್ಗೆ ಡಿಕ್ಕಿ ಹೊಡೆದ ಬೈಕ್; ನವವಿವಾಹಿತ ಸಾವು
-
ಜನವರಿ 30 ರಂದು ಬ್ರಹ್ಮಾವರ ತಾಲೂಕಿನ ನೆಂಚಾರು ಮತ್ತು ನಾಲ್ಕೂರಿನಲ್ಲಿ ಗ್ರಾಮ ವಾಸ್ತವ್ಯ ಪೈಲಟ್ ಕಾರ್ಯಕ್ರಮ : ಸದಾಶಿವ ಪ್ರಭು
-
ಉಡುಪಿ ಗಣರಾಜ್ಯೋತ್ಸವ ಸಂಭ್ರಮಕ್ಕೆ ಮೂರು ವರ್ಷದ ಬಾಲೆಯಿಂದ ಮಿಷನ್ ಗನ್ ಭದ್ರತೆ
-
ಉತ್ತಮ ಆಡಳಿತ ಕೊಡುವ ಮನೋಭಾವನೆ ಇದ್ದರೆ ಖಾತೆ ಕ್ಯಾತೆ ಬರುವುದಿಲ್ಲ – ಸಚಿವ ಅಂಗಾರ
-
ಸೆಕ್ಯುರಿಟಿಗಾರ್ಡ್ 6ನೇ ಮಹಡಿಯಿಂದ ಬಿದ್ದು ಮೃತ್ಯು
You must be logged in to post a comment Login