LATEST NEWS
ಮಂಗಳೂರು – ಇಬ್ಬರು ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಮಂಗಳೂರು, ಮಾರ್ಚ್ 29 : ಸಾರ್ವಜನಿಕರಿಗೆ ಮತ್ತು ವಿಧ್ಯಾರ್ಥಿಗಳಿಗೆ ಮಾದಕ ವಸ್ತು ಹೈಡೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪಾಂಡೇಶ್ವರ ಸುಭಾಸ್ ನಗರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23), ಬಂಟ್ವಾಳ ಬೋಳಂಗಡಿ ನಿವಾಸಿ ರೋಯಸ್ಸನ್ ಕ್ಷೇವಿಯರ್ ಲೋಬೋ(22) ಎಂದು ಗುರುತಿಸಲಾಗಿದೆ. ಬಂಧಿತರಿಂದ 9 ಲಕ್ಷ ಮೌಲ್ಯದ ಹೈಡೋವಿಡ್ ಗಾಂಜಾ, ಚರಸ್, ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿದ್ದಾರೆ. ಬೆಂಗಳೂರಿನಿಂದ ಹೈಡೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಖರೀದಿಸಿ ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಶಿವಭಾಗ್ 5ನೇ ಕ್ರಾಸ್ ರಸ್ತೆಯಲ್ಲಿದ್ದಾಗ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳು ಐಷಾರಾಮಿ ಜೀವನ ಸಾಗಿಸುವ ಉದ್ದೇಶದಿಂದ ಮಾದಕ ವಸ್ತು ಮಾರಾಟದ ದಂಧೆಯನ್ನು ನಡೆಸುತ್ತಿದ್ದರು.

ಪತ್ತೆ ಕಾರ್ಯದಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ. ಪಿಎಸ್‌ಐ ನರೇಂದ್ರ, ಎಎಸ್‌ಐಗಳಾದ ರಾಮ ಪೂಜಾರಿ, ಶೀನಪ್ಪ ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿ ಪಾಲ್ಗೊಂಡಿದ್ದರು.