Connect with us

    LATEST NEWS

    ಮಂಗಳೂರು – ಕೇರಳದ ಇಬ್ಬರು ಡ್ರಗ್ ಪೆಡ್ಲರ್ ಅರೆಸ್ಟ್

    ಮಂಗಳೂರು ನವೆಂಬರ್ 09: ನಿಷೇಧಿಕ ಡ್ರಗ್ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.


    ಬಂಧಿತರನ್ನು 1.ಮುಸ್ತಫಾ(37) 2. ಶಂಶುದ್ದೀನ್ ಎ(38) ಎಂದು ಗುರುತಿಸಲಾಗಿದೆ. ಆರೋಪಿಗಳು ದಿನಾಂಕ 09-11-2023 ರಂದು ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ ಸಿ ರೋಡ್ ನ ರಾಷ್ಟ್ರೀಯ ಹೆದ್ದಾರಿ 66 ರ ಬಳಿಯಲ್ಲಿ ಮಾದಕವಸ್ತು ಎಂಡಿಎಂಎ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
    ಬಂಧಿತ ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿರುತ್ತಾರೆ.

    Share Information
    Advertisement
    Click to comment

    You must be logged in to post a comment Login

    Leave a Reply