BELTHANGADI
ಬೆಳ್ತಂಗಡಿ – ಒಂದೇ ದಿನ ಸ್ನೇಹಿತೆಯರ ನಿಗೂಢ ಸಾವು..!!

ಬೆಳ್ತಂಗಡಿ ಎಪ್ರಿಲ್ 7 : ಗೆಳತಿಯರಾಗಿದ್ದ ಇಬ್ಬರು ಯುವತಿಯರು ಒಂದೇ ದಿನ ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ.
ಮೃತಪಟ್ಟ ಯುವತಿಯರನ್ನು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಬಾಬು ಹಾಗೂ ಗೀತ ದಂಪತಿಗಳ ಪುತ್ರಿ ರಕ್ಷಿತಾ (22) ಮತ್ತು ಆಕೆಯ ನೆರೆಮನೆಯ ಶ್ರೀನಿವಾಸ ಆಚಾರಿ ಹಾಗೂ ಪಾರ್ವತಿ ದಂಪತಿಗಳ ಪುತ್ರಿ ಲಾವಣ್ಯ (20) ಎಂದು ಗುರುತಿಸಲಾಗಿದೆ.

ಇವರಿಬ್ಬರೂ ಕೂಡ ಕಳೆದೊಂದು ವರ್ಷದಿಂದ ಅನಾರು ಹಾಗೂ ಮುಂಡೂರುಪಳಿಕೆ-ಉಪ್ಪಾರಪಳಿಕೆ ವಲಯದ ಸೇವಾ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಉತ್ತಮ ಸ್ನೇಹಿತೆಯಾಗಿದ್ದರು. ಭಾನುವಾರ ರಕ್ಷಿತ ಹಾಗೂ ಲಾವಣ್ಯರವರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಏಪ್ರಿಲ್ 6ರಂದು ಬೆಳಗ್ಗೆ ರಕ್ಷಿತಾ ಹಾಗೂ ಸಂಜೆ ಲಾವಣ್ಯ ಮೃತಪಟ್ಟಿದ್ದಾರೆ. ಇಬ್ಬರ ಹೊಟ್ಟೆನೋವಿಗೂ ನಿಖರ ಕಾರಣ ತಿಳಿದು ಬಂದಿಲ್ಲ. ವೈದ್ಯಕೀಯ ಪರೀಕ್ಷೆಯ ವರದಿ ನಂತರವೇ ತಿಳಿದು ಬರಬೇಕಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಯುವತಿಯರ ಸಾವಿನ ಬಗ್ಗೆ ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ.