LATEST NEWS
ಕುಂದಾಪುರ – ಈಜಲು ಹೋದ ಇಬ್ಬರು ಬಾಲಕರು ನೀರುಪಾಲು
ಕುಂದಾಪುರ ಡಿಸೆಂಬರ್ 01: ಡ್ಯಾಮ್ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶ್ರೀಶ(13), ಜಯಂತ್(19) ಎಂದು ಗುರುತಿಸಲಾಗಿದೆ. ಮೃತ ದುರ್ದೈವಿಗಳು. ರಜೆ ಹಿನ್ನೆಲೆ ಗೆಳೆಯರ ಜೊತೆ ಈಜಲು ಹೋಗಿದ್ದಾಗ ಅವಘಡ ಸಂಭವಿಸಿದೆ.
ಬೆಳ್ವೆ ಸಮೀಪದ ಕಜ್ಕೆ ಸಂತೆಕಟ್ಟೆ ಸಂಪರ್ಕ ರಸ್ತೆಯ ಬಳಿ ಇರುವ ಕಿಂಡಿ ಅಣೆಕಟ್ಟುವಿನ ಮೇಲ್ಭಾಗದಲ್ಲಿ ಶ್ರೀಶ ಆಚಾರ್, ಜಯಂತ್ ನಾಯ್ಕ್ ಸೇರಿದಂತೆ ನಾಲ್ಕು ಮಕ್ಕಳು ಈಜಲು ತೆರಳಿದ್ದರು ಎನ್ನಲಾಗಿದೆ. ಶ್ರೀಶ ನೀರಿನಲ್ಲಿ ಆಯ ತಪ್ಪುತ್ತಿದ್ದಂತೆ ರಕ್ಷಣೆಗೆ ಜಯಂತ್ ನೀರಿಗೆ ಧುಮುಕಿದ್ದು ಇಬ್ಬರು ನೀರು ಪಾಲಾಗಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದ ಇತರ ಮಕ್ಕಳು ಬೊಬ್ಬೆ ಹೊಡೆದಿದ್ದು ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ನೀರಿನಲ್ಲಿ ಮುಳುಗಿದ್ದ ಮಕ್ಕಳ ಹುಡುಕಲು ಮುಂದಾದರು. ಕೆಲವೇ ಹೊತ್ತಿನಲ್ಲಿ ಎರಡು ಮೃತದೇಹಗಳು ಪತ್ತೆಯಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.