Connect with us

    LATEST NEWS

    ಮಂಗಳೂರು ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ

    ಮಂಗಳೂರು ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ

    ಮಂಗಳೂರು ಫೆಬ್ರವರಿ 17: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದ ಇಬ್ಬರು ವ್ಯಕ್ತಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಬಂಧಿತರಿಂದ ಸುಮಾರು 58.95 ಲಕ್ಷ ರೂ. ಬೆಲೆಬಾಳುವ ಚಿನ್ನವನ್ನು ವಶಕ್ಕೆ ಪಡದಿದ್ದಾರೆ. ಬಂಧಿತರನ್ನು ಕೇರಳದ ಮುಹಮ್ಮದ್ ಸ್ವಾಲಿಹ್ ಹಾಗೂ ಮೊಹಮ್ಮದ್ ನಿಷಾದ್ ಎಂದು ಗುರುತಿಸಲಾಗಿದೆ.

    ಮೊದಲ ಪ್ರಕರಣದಲ್ಲಿ ಆರೋಪಿ ಮುಹಮ್ಮದ್ ಸ್ವಾಲಿಹ್ ಸ್ಪೈಸ್‌ಜೆಟ್ ವಿಮಾನದ ಮೂಲಕ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದು, ಫೆಸ್ಟ್ ರೂಪದಲ್ಲಿ ಚಿನ್ನವನ್ನು ಕರಗಿಸಿ ಮಾತ್ರೆಗಳ ರೀತಿ ತಯಾರಿಸಿ ತನ್ನ ಗುದನಾಳದೊಳಗೆ ಇಟ್ಟು ಅಕ್ರವಾಗಿ ಸಾಗಾಟಕ್ಕೆ ಯತ್ನಿಸಿದ್ದಾನೆ.
    ಇದೇ ರೀತಿಯಲ್ಲಿ ಮತ್ತೊಂದು ಪ್ರಕರಣದಲ್ಲಿ ಆರೋಪಿ ಮೊಹಮ್ಮದ್ ನಿಷಾದ್ ದುಬೈನಿಂದ ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿದ್ದು, ಅಕ್ರಮವಾಗಿ ಚಿನ್ನ ಸಾಗಾಟ ಮಾಡುವಾಗ ಸಿಕ್ಕಿ ಬಿದ್ದಿದ್ದಾನೆ.

    ಎರಡು ಪ್ರಕರಣಗಳಲ್ಲಿ ಒಟ್ಟು 58.95 ಲಕ್ಷ ರೂಪಾಯಿ ಬೆಲೆ ಬಾಳುವ 1 ಕೆಜಿ 452 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply