BANTWAL
ಬಂಟ್ವಾಳ: ಎರಡು ರಸ್ತೆ ಅಪಘಾತಗಳಲ್ಲಿ ಮಹಿಳೆ ಸೇರಿ ಇಬ್ಬರು ಬಲಿ, 8 ಮಂದಿ ಗಾಯ..!!
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟು 8 ಮಂದಿ ಗಾಯಗೊಂಡಿದ್ದಾರೆ.
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟು 8 ಮಂದಿ ಗಾಯಗೊಂಡಿದ್ದಾರೆ.
ಬಂಟ್ವಾಳ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ, ಗುಂಪಕಲ್ಲು ಎಂಬಲ್ಲಿ ಕಾರು – ಆಟೋ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಆಟೋದಲ್ಲಿದ್ದ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇತರ ಎಂಟು ಮಂದಿಗೆ ಗಾಯಗೊಂಡಿದ್ದಾರೆ. ಪಂಜಿಕಲ್ಲು ಗ್ರಾಮದ ಬಾಂದೊಟ್ಟು ರೆಚ್ಚಾಡಿ ಹರೀಶ್ ಗೌಡ ಎಂಬವರ ಪತ್ನಿ ತಿಲಕಾ (35) ಮೃತಪಟ್ಟ ಮಹಿಳೆಯಾಗಿದ್ದಾರೆ. ಮಂಗಳೂರಿನಿಂದ ಪುಂಜಾಲಕಟ್ಟೆ ಕಡೆಗೆ ಬರುತ್ತಿದ್ದ ಮಾರುತಿ ರಿಟ್ಜ್ ಕಾರು ಹಾಗೂ ಬಂಟ್ವಾಳ ಕಡೆಗೆ ಸಾಗುತ್ತಿದ್ದ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ಯಶಸ್ವಿನಿ, ಗೀತಾ, ರೇವತಿ, ಸರಸ್ವತಿ, ವೇದಾವತಿ, ರಾಜೀವಿ ಮತ್ತು ದಿಗಂತ್ ಹಾಗೂ ದಿಶಾನಿ ಗಾಯಾಳುಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಟೋದಲ್ಲಿ ಪಂಜಿಕಲ್ಲುವಿನ ಒಂದೇ ಕುಟುಂಬದ ಮನೆ ಮಂದಿ ಮಧ್ವದಲ್ಲಿ ಸೀಮಂತ ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಮನೆಗೆ ಬರುತ್ತಿದ್ದಾಗ ಕಾರಿನ ಚಕ್ರ ಸ್ಫೋಟ ಟಗೊಂಡು ಕುಟುಂಬ ಪ್ರಯಾಣಿಸುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿತ್ತು. ಕಾರಿನಲ್ಲಿ ದಂಪತಿ ಇದ್ದು ಕಾರಿನ ಏರ್ ಬಲೂನ್ ಬಿಚ್ಚಿಕೊಂಡ ಪರಿಣಾಮ ಅವರಿಗೆ ಹೆಚ್ಚಿನ ಗಾ ಸಂಭವಿಸಲಿಲ್ಲ ಎನ್ನಲಾಗಿದೆ. ಮೃತಪಟ್ಟ ಮಹಿಳೆ ತಿಲಕಾ ಅವರು ಪತಿ, ಇಬ್ಬರು ಎಳೆಯ ಮಕ್ಕಳನ್ನು ಅಗಲಿದ್ದಾರೆ.
ಅಪಘಾತ ಮಾಹಿತಿ ಪಡೆದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆಗೆ ಸೂಚಿಸಿದರು. ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಬಳಿ ಗಾಯಾಳುಗಳ ಆರೋಗ್ಯ ಕಾಳಜಿ ವಹಿಸಿ ವಿಚಾರಿಸಿದರು. ಘಟನೆಯ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಬಂಟ್ವಾಳ ವಗ್ಗ ಉಗ್ಗಬೆಟ್ಟು ಎಂಬಲ್ಲಿ ನಡೆದ ಸರ್ಕಾರಿ ಬಸ್ ಮತ್ತು ಬೈಕ್ ಅಪಘಾತದಲ್ಲಿ ಬೈಕ್ ಸವಾರ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಡೆಕ್ಕಲೊಟ್ಟು ನಿವಾಸಿ ರಾಜೇಂದ್ರ ಪೂಜಾರಿ ಸಾವನ್ನಪ್ಪಿದ್ದಾರೆ. ಬಸ್ ಧರ್ಮಸ್ಥಳದಿಂದ ಮಂಗಳೂರಿಗೆ ಬರುತ್ತಿದ್ದಾರೆ ಬೈಕ್ ಸವಾರ ವೆಣೂರು ಕಡೆ ತೆರಳುತ್ತಿದ್ದರು ಎನ್ನಲಾಗಿದೆ. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.