BANTWAL
ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ನೀರು ಪಾಲು
ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ನೀರು ಪಾಲು
ಮಂಗಳೂರು ಜನವರಿ 28: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ತುಂಬೆಯ ನೇತ್ರಾವತಿ ನದಿಯಲ್ಲಿ ಘಟನೆ ನಡೆದಿದ್ದು, ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಸಂದರ್ಭದಲ್ಲಿ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ.
ಮೃತ ಬಾಲಕರನ್ನು ಸವಾದ್, ರಮ್ಲಾನ್ ಎಂದು ಗುರುತಿಸಲಾಗಿದ್ದು ಇವರು ಪುದು ಗ್ರಾಮದ ಮಾರಿಪಳ್ಳ ನಿವಾಸಿಗಳು ಎಂದು ಗುರುತಿಸಲಾಗಿದೆ.
ಮೃತದೇಹಗಳ ಪತ್ತೆ ಕಾರ್ಯ ಮುಂದುವರೆದಿದ್ದು , ಓರ್ವ ಬಾಲಕನ ಮೃತದೇಹ ಪತ್ತೆಯಾಗಿದೆ. ಇನ್ನೊರ್ವನ ಮೃತದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login