Connect with us

    DAKSHINA KANNADA

    ಕಡಬ – ಸ್ನಾನಕ್ಕೆಂದು ನದಿಗೆ ಇಳಿದ ಇಬ್ಬರು ಯುವಕರು ನೀರು ಪಾಲು

    ಕಡಬ ಎಪ್ರಿಲ್ 19: ಸ್ನಾನಕ್ಕೆಂದು ನದಿಗೆ ಇಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬ ತಾಲೂಕಿನ ಇಚಿಲಂಪಾಡಿಯಲ್ಲಿ ನಡೆದಿದೆ.


    ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಝಾಕಿರ್(20) ಹಾಗೂ ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ ನಿವಾಸಿ ಸಿನಾನ್ ಎಂದು ಗುರುತಿಸಲಾಗಿದೆ.

    ಮೃತ ಯುವಕರು ಸ್ನಾನಕ್ಕೆಂದು ಇಚಿಲಂಪಾಡಿ ಸೇತುವೆ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಷಯ ತಿಳಿದ ಸ್ಥಳೀಯರು ನೀರಿಗಿಳಿದು ಇಬ್ಬರ ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply