Connect with us

DAKSHINA KANNADA

ಮಂಗಳೂರು: ಏರ್‌ಪೋರ್ಟ್ ರೋಡಲ್ಲಿ ತಡರಾತ್ರಿ ಬೈಕ್ ಸ್ಕಿಡ್,ಇಬ್ಬರು ಯುವಕರ ಸಾವು..!

ಮಂಗಳೂರು: ಮಂಗಳೂರು ನಗರದ ಯೆಯ್ಯಾಡಿ ಏರ್ಪೋರ್ಟ್ ರೋಡಲ್ಲಿ ತಡ ರಾತ್ರಿ  ಬೈಕೊಂದು  ಸ್ಕಿಡ್ ಆಗಿ ಇಬ್ಬರು ಸವಾರರೂ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಈ ಅವಘಡ ಸಂಭವಿಸಿದ್ದು ಕೋಡಿಕಲ್ ನಿವಾಸಿ ಕಾಶೀನಾಥ್(17) ಮತ್ತು ಉಪ್ಪಿನಂಗಡಿಯ ಚೇತನ್(24) ಮೃತ ದುರ್ದೈವಿಗಳಾಗಿದ್ದಾರೆ.

ಇವರಿಬ್ಬರಿದ್ದ ಬೈಕ್ ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಬೈಕ್  ಉರುಳಿಬಿದ್ದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ…

ಬಿಜೆಪಿ ‘ಸದಸ್ಯತ್ವ’ ವಿವಾದಕ್ಕೆ ಸಿಲುಕಿದ ತುಳು ಚಿತ್ರನಟ, ಸೌದಿ ಅರೇಬಿಯಾದಲ್ಲಿ ‘ಕಾಪಿಕಾಡ್’ ಕಾಮಿಡಿ ಶೋಗೆ ಬಹಿಷ್ಕಾರದ ಬೆದರಿಕೆ..!

Share Information
Continue Reading
Advertisement
Click to comment

Leave a Reply

Your email address will not be published. Required fields are marked *