Connect with us

    LATEST NEWS

    ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

    ಮಂಗಳೂರು ಸೆಪ್ಟೆಂಬರ್ 30: ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಭಾನುವಾರ ಸಾಯಂಕಾಲ ಸಂಭವಿಸಿದೆ. ನಾಪತ್ತೆಯಾಗಿರುವ ಯುವಕರನ್ನು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ಎಂದು ಗುರುತಿಸಲಾಗಿದೆ.


    ಮರವೂರು ವೆಂಟೆಡ್ ಡ್ಯಾಂನ ಪಕ್ಕದಲ್ಲಿರುವ ರೈಲ್ವೆ ಸೇತುವೆಯ ಬಳಿಯ ಫಲ್ಗುಣಿ ನದಿಯಲ್ಲಿ ಈಜಲು ನಾಲ್ವರು ಯುವಕರು ಭಾನುವಾರ ಸಾಯಂಕಾಲ 4 ಗಂಟೆಗೆ ಹೋಗಿದ್ದರು. ಸುಮಿತ್ ಹಾಗೂ ಅನೀಶ್ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಜೊತೆಗಿದ್ದ ಕೋಡಿಕಲ್ ನಿವಾಸಿಗಳಾದ ಅರುಣ್(19) ಹಾಗೂ ದೀಕ್ಷಿತ್(18) ಈಜಿ ಪಾರಾಗಿದ್ದಾರೆ.

    ನಾಪತ್ತೆಯಾದವರ ಹುಡುಕಾಟಕ್ಕಾಗಿ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರು ಆಗಮಿಸಿ, ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಜ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply