LATEST NEWS
ಉದ್ಯಾವರ – ಬೈಕ್ ಗೆ ಟ್ರಕ್ ಡಿಕ್ಕಿ – ಬೈಕ್ ಸವಾರ ಸಾವು – ಸುಟ್ಟು ಭಸ್ಮವಾದ ಟ್ರಕ್ ಮತ್ತು ಬೈಕ್
ಉಡುಪಿ ಜನವರಿ 11: ಟ್ರಕ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿ, ಬಳಿಕ ಟ್ರಕ್ ಬೆಂಕಿಗಾಹುತಿಯಾದ ಘಟನೆ ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದೆ.
ಮೃತರನ್ನು ಬೈಕ್ ಸವಾರ ಕೊರಂಗ್ರಪಾಡಿ ನಿವಾಸಿ ಅವಿನಾಶ್ ಆಚಾರ್ಯ( 19) ಎಂದು ಗುರುತಿಸಲಾಗಿದೆ. ಗುಜರಾತ್ ಕಡೆಯಿಂದ ಕೇರಳ ಕಡೆಗೆ ಬರುತ್ತಿದ್ದ ಈಚರ್ ಲಾರಿ ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸವಾರ ಅವಿನಾಶ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಅಪಘಾತದ ವೇಳೆ ಬೈಕ್ ನ್ನು ಲಾರಿ ಎಳೆದುಕೊಂಡ ಹೋದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಲಾರಿಗೆ ಹಬ್ಬಿ ಲಾರಿ ಹಾಗೂ ಬೈಕ್ ಎರಡೂ ಸುಟ್ಟು ಕರಕಲಾಗಿವೆ.ಸ್ಥಳಕ್ಕೆ ಉಡುಪಿ ಸಂಚಾರ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.